Menu

ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು

ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು.

ಸಾರಿಗೆ ನಿಗಮಗಳು ನಷ್ಟದಲ್ಲಿ ಇರುವುದರಿಂದ ಹಾಗೂ ಸಿಬ್ಬಂದಿಗೆ ಬಡ್ತಿ ಹಾಗೂ ಬೋನಸ್ ನೀಡಲು ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ 4 ನಿಗಮಗಳು ಶೇ.30ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಶಿಫಾರಸು ಮಾಡಿದ್ದರು.

ಇತ್ತೀಚೆಗೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶೇ.30ರಷ್ಟು ಬಸ್ ಪ್ರಯಾಣ ದರ ಏರಿಕೆ ಕುರಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು.

Related Posts

Leave a Reply

Your email address will not be published. Required fields are marked *