Menu

ಜಾತಿ ಗಣತಿ ಮರು ಸಮೀಕ್ಷೆಗೆ ರಾಜ್ಯ ಸಚಿವ ಸಂಪುಟ ಅಸ್ತು

ಬೆಂಗಳೂರು: ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿಯ ಮರು ಸಮೀಕ್ಷೆ ಕುರಿತು ಚರ್ಚೆ ನಡೆಸಿ ತೀರ್ಮಾನಿಸಲಾಗಿದೆ ಎಂದರು.

2011ರಲ್ಲಿ ಜಾತಿ ಗಣತಿಗೆ ನಿರ್ಧರಿಸಿದ್ದೆವು. 2015 ಏಪ್ರಿಲ್ 11ರಂದು ಜಾತಿ ಗಣತಿ ಆರಂಭವಾಗಿದ್ದು, ಆಗ 6.5 ಕೋಟಿ ಜನಸಂಖ್ಯೆ ಇತ್ತು ಎಂದು ಅಂದಾಜಿಸಲಾಗಿದೆ ಎಂದರು.

ಜಾತಿ ಗಣತಿ ನಡೆದು 9 ವರ್ಷಗಳು ಕಳೆದಿವೆ. ಈಗ ಜನಸಂಖ್ಯೆ ಕೂಡ ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗೆ ತೆರಳಿ ಜಾತಿ ಗಣತಿ ಮರು ಸಮೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

Related Posts

Leave a Reply

Your email address will not be published. Required fields are marked *