Menu

24,000 ಕೋಟಿ ರೂ. ಯೋಜನೆಗಳಿಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

siddaramiah

ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಬುಧವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಿಎಂ 12ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ಸಲ್ಲಿಸಿದರು.

ಕರ್ನಾಟಕ ಸರ್ಕಾರವು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಜಾಲದ ಅಭಿವೃದ್ಧಿಯನ್ನು ಬೆಂಬಲಿಸುತ್ತಿದ್ದು, ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಂದಾಯ ಇಲಾಖೆಯೊಂದಿಗೆ ಹಾಗೂ ಅರಣ್ಯ ತೀರುವಳಿ ಪ್ರಕ್ರಿಯೆ ತ್ವರಿತಗೊಳಿಸಲು ಅರಣ್ಯ ಇಲಾಖೆಯೊಂದಿಗೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿದೆ. ನೀರು ಹಾಗೂ ವಿದ್ಯುತ್ ಸಂಪರ್ಕ ಸೇರಿದಂತೆ Utility Shifting ಕಾರ್ಯವನ್ನು ಚುರುಕುಗೊಳಿಸಲು ಸಂಬಂಧಪಟ್ಟ ಇಲಾಖೆಗೊಂದಿಗೆ ಸಭೆ ನಡೆಸುವ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ.

10,000 ಪಿಯುಸಿಗಿಂತಲೂ ಸಂಚಾರ ತೀವ್ರತೆ ಹೆಚ್ಚಿರುವ ಇರುವ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ರಾಜ್ಯದ ಸಮಾಜಿಕ ಮತ್ತು ಆರ್ಥಿಕ  ಅಭಿವೃದ್ದಿಗಾಗಿ ಈ ಕೆಳಕಂಡ ಯೋಜನೆಗಳನ್ನು ಮಂಜೂರು ಮಾಡಬೇಕೆಂದು ಮಾನ್ಯ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ  ಕೇಂದ್ರ ಸಚಿವರಲ್ಲಿ ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

  1. ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಮೈಸೂರಿನ ರಾಷ್ಟ್ರೀಯ ಹೆದ್ದಾರಿ -275ರಲ್ಲಿ 9 ಗ್ರೇಡ್ ಸಪರೇಟರ್ಗಳ ನಿರ್ಮಾಣ.
  2. ರಾಷ್ಟ್ರೀಯ ಹೆದ್ದಾರಿ -75 ( ಹಳೆಯ ರಾ.ಹೆ 48) ರ ಶಿರಾಡಿ ಘಾಟ್ ನ 237+000 ರಿಂದ 263+000 (ಮಾರನಹಳ್ಳಿಯಿಂದ ಅಡ್ಡಹೊಳೆ ಸೆಕ್ಷನ್)  ವರೆಗೆ ಸುರಂಗ ನಿರ್ಮಾಣ ಮಾಡುವ ಮೂಲಕ  ಮಂಗಳೂರು ಬಂದರು (ದೇಶದ 7 ನೇ ಅತಿ ದೊಡ್ಡ ಬಂದರು) ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವೆ  ಸಂಪರ್ಕವನ್ನು ಸುಧಾರಿಸುವುದು.
  3. ಪುಣೆ- ಬೆಂಗಳೂರು ಗ್ರೀನ್ ಫೀಲ್ಡ್ ಎಕ್ಸ್ ಪ್ರೆಸ್ ವೇ ನ್ನು ಶೀಘ್ರವಾಗಿ ಮಂಜೂರು ಮಾಡುವುದು.
  4. ಮುಂಬರುವ ವಾರ್ಷಿಕ ಯೋಜನೆ 20205-26 ರಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು 24000 ಕೋಟಿಗಳಿಗೆ ಹೆಚ್ಚಿಸಿ ಮಂಜೂರು ಮಾಡುವುದು.
  5. ಬೆಂಗಳೂರಿ ನಗರದ ಹೆಬ್ಬಾಳ ಜಂಕ್ಷನ್ ನ ರಾಷ್ಟ್ರೀಯ ಹೆದ್ದಾರಿ- 44 ರಲ್ಲಿ ಮೇಲ್ಸೇತುವೆ ನಿರ್ಮಾಣ.
  6. ತಾತ್ವಿಕವಾಗಿ ಘೋಷಿತವಾಗಿರುವ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಆದ್ಯತೆ ಮೇಲೆ ಮೇಲ್ದರ್ಜೆಗೇರಿಸುವುದು.
  7. ಬೆಂಗಳೂರು ನಗರದಲ್ಲಿ ಮೈಸೂರು ರಸ್ತೆಯನ್ನು ಸಂಪರ್ಕಿಸುವ ಸುರಂಗ ನಿರ್ಮಾಣ ( ರಾ.ಹೆ- 275) ಮತ್ತು ಹೊಸೂರು ರಸ್ತೆ ( ರಾ.ಹೆ-48 ಮತ್ತು ರಾ.ಹೆ-75) ( ಎಲೆಕ್ಟ್ರಾನಿಕ್ ಸಿಟಿ) ಮಾರ್ಗವಾಗಿ ತುಮಕೂರು ರಸ್ತೆ (ರಾ.ಹೆ-48), ಬಳ್ಳಾರಿ ರಸ್ತೆ ( ರಾ.ಹೆ-44) ಮತ್ತು ಹಳೆ ಮದ್ರಾಸು ರಸ್ತೆ ( ಹಳೆ ರಾ.ಹೆ -4)
  8. ಬೆಳಗಾವಿ ನಗರ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಬೆಳಗಾವಿ ನಗರದ ರಾ.ಹೆ-4 ರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ
  9. ಕಲಬುರ್ಗಿ-ವಾಡಿ-ಯಾದಗಿರಿ-ಕೆಂದೆಚೂರ್-ಜಡ್ ಚೇರ್ಲಾ ವಿಭಾಗದಲ್ಲಿ ಚತುಷ್ಪಥ ರಸ್ತೆ ನಿರ್ಮಿಸಿ ರಸ್ತೆ ಅಗಲೀಕರಣ ಕೈಗೊಳ್ಳುವುದು.
  10. ರಾಜ್ಯದ ಯಾದಗಿರಿ ಜಿಲ್ಲೆಯಲ್ಲಿ ರಾ.ಹೆ 150ಎ ( ಜೇವರ್ಗಿ- ಚಾಮರಾಜನಗರ ವಿಭಾಗ) ರಲ್ಲಿ ಭೀಮರಾಯನಗುಡಿ ಮತ್ತು ಶಹಪುರ ಪಟ್ಟಣ ಕ್ಕೆ  2 ಎಲ್+ ಪಿಎಸ್ ಗ್ರೀನ್ ಫೀಲ್ಡ್  ಸಂಯೋಜಿತ ಬೈಪಾಸ್ ನಿರ್ಮಾಣ
  11. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ರಾ.ಹೆ-752ಕೆ ನಿಂದ ರಾ.ಹೆ -65 ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು
  12. ಕರ್ನಾಟಕ ರಾಜ್ಯದಲ್ಲಿ ಎಸ್ ಪಿ ಯು ಆರ್ ಅಡಿಯಲ್ಲಿ ದೇವಲ್ ಗಾಣಗಾಪುರದಿಂದ ಪಂಡರಾಪುರವರೆಗಿನ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಘೋಷಿಸುವುದು

ಈ ಎಲ್ಲಾ ಪ್ರಸ್ತಾವನೆಗಳನ್ನು ಪರಿಗಣಿಸಿ ಮಂಜೂರಾತಿಗಳನ್ನು ನೀಡಲು ಸಂಬಂಧಿಸಿದವರಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಪತ್ರದಲ್ಲಿ  ಕೋರಿದ್ದಾರೆ.

Related Posts

Leave a Reply

Your email address will not be published. Required fields are marked *