Thursday, October 29, 2026
Menu

ಸ್ಟಿಂಗ್‌ ಆಪರೇಷನ್‌: ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಹಾಗೂ ವಿವಾದ ಸೃಷ್ಟಿಸಿದ್ದ ‘ಸ್ಟಿಂಗ್‌ ಆಪರೇಷನ್‌’ (Sting Operation) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಸಿಬಿ (CCB) ಪೊಲೀಸರು ಅಧಿಕೃತವಾಗಿ ಕ್ಲೀನ್‌ಚಿಟ್ ನೀಡಿದ್ದಾರೆ. ಪ್ರಕರಣದ ಕುರಿತು ಕೂಲಂಕಷವಾಗಿ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ ಅಧಿಕಾರಿಗಳು, ಈ ಕುರಿತು ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ವೀಡಿಯೊದಲ್ಲಿ ಬಿಂಬಿಸಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪಗಳು ಹಾಗೂ ಅಷ್ಟು ವಿಚಾರಗಳು ಸಂಪೂರ್ಣ ಕಟ್ಟುಕಥೆ ಮತ್ತು ಸೃಷ್ಟಿಸಲ್ಪಟ್ಟವು ಎಂದು ತನಿಖೆಯಿಂದ ಸ್ಪಷ್ಟಗೊಂಡಿದೆ ಎಂದು ಸಿಸಿಬಿ ತಿಳಿಸಿದೆ.

ವಿಚಾರಣೆ ಹಾಗೂ ಸಾಕ್ಷ್ಯಾಧಾರಗಳು

ಪ್ರಕರಣದ ತನಿಖೆಯ ವೇಳೆ ಲಭ್ಯವಾದ ಸಾಕ್ಷ್ಯಾಧಾರಗಳು ಮತ್ತು ದಾಖಲಿಸಲಾದ ಹೇಳಿಕೆಗಳ ಆಧಾರದ ಮೇಲೆ ಈ ಪ್ರಕಟಣೆ ಹೊರಡಿಸಲಾಗಿದೆ. ಸ್ಟಿಂಗ್‌ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯ ದುರುದ್ದೇಶದಿಂದ ಸೃಷ್ಟಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ವೀಡಿಯೊದಲ್ಲಿ ಕಾಣಿಸಿಕೊಂಡಿರುವ ಎಲ್ಲ ವ್ಯಕ್ತಿಗಳನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದು, ಕೆಲವರನ್ನು ಒಂದಕ್ಕಿಂತ ಹೆಚ್ಚು ಬಾರಿ ತೀವ್ರ ವಿಚಾರಣೆ ನಡೆಸಲಾಗಿದೆ.

ವಿಡಿಯೋ ಚಿತ್ರೀಕರಿಸಲು ಬಳಸಲಾಗಿದ್ದ ಮೂಲ ಮೊಬೈಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅದನ್ನು ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆಗೆ (FSL) ಕಳುಹಿಸಲಾಗಿದೆ. ಎಫ್‌ಎಸ್‌ಎಲ್ ವರದಿ ನಿರೀಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಭಾವಿ ರಾಜಕೀಯ ಸಂಪರ್ಕ

ಈ ಸ್ಟಿಂಗ್‌ ಕೇಸ್‌ನ ಹಿಂದೆ ಪ್ರಭಾವಿ ರಾಜಕೀಯ ಸಂಪರ್ಕಗಳನ್ನು ಹೊಂದಿರುವ ವ್ಯಕ್ತಿಗಳ ಕೈವಾಡವಿರುವುದು ತನಿಖೆಯಿಂದ ಕಂಡುಬಂದಿದೆ. ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸದಿದ್ದರೂ, ಇದರ ಹಿಂದೆ ಪ್ರಭಾವಿ ರಾಜಕೀಯ ನಂಟು ಇರುವುದಾಗಿ ಸಿಸಿಬಿ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.

ಸುಮಾರು 12 ವರ್ಷಗಳ ಹಿಂದೆ ಅಂದರೆ 2011ರಲ್ಲಿ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದ ಈ ವೀಡಿಯೊವನ್ನು 2023ರಲ್ಲಿ ಚಿತ್ರೀಕರಿಸಲಾಗಿದೆ. ಈ ವಿಡಿಯೋವನ್ನು ಯಾವ ಸಂದರ್ಭಗಳಲ್ಲಿ ಹಾಗೂ ಯಾವ ಉದ್ದೇಶದಿಂದ ಸೃಷ್ಟಿಸಲಾಯಿತು? ಇದರ ಹಿಂದೆ ಭಾಗಿಯಾಗಿರುವ ಪ್ರಮುಖ ವ್ಯಕ್ತಿಗಳು ಮತ್ತು ಸಂಚುಕೋರರು ಯಾರು ಎಂಬ ಹತ್ತು ಹಲವು ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ.

#StingOperation #Siddaramaiah #CCBKarnataka #CleanChit #BangaloreNews #KarnatakaPolitics #UdayakalaNews #PoliticalControversy

Related Posts

Leave a Reply

Your email address will not be published. Required fields are marked *