Menu

ಹಾಸನದಲ್ಲಿ ಕಟ್ಟಡ ಕುಸಿದು ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವು

ರಾಜ್ಯದ ನಾನಾ ಕಡೆ ಅವಘಡಗಳಿಂದ ಭಾನುವಾರ ಹಲವರು ಪ್ರಾಣ ಕಳೆದುಕೊಂಡಿರುವ ಮಧ್ಯೆ ಹಾಸನದಲ್ಲಿ ಕಟ್ಟಡವೊಂದು ಕುಸಿದು ಮೂವರು ಮಹಿಳೆಯರು ಸ್ಥಳದಲ್ಲೇ ಅಸು ನೀಗಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪಾಳು ಬಿದ್ದಿದ್ದ ಕಟ್ಟಡ ಕುಸಿದುಬಿದ್ದು ಈ ದುರಂತ ಸಂಭವಿಸಿದೆ. ಬೀದಿ ಬದಿ ವ್ಯಾಪಾರಿಗಳಾಗಿದ್ದ ಅಶಾ ಹಾಗೂ ದೀಪಾ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಸತ್ಯನಾರಾಯಣ ಎಂಬವರಿಗೆ ಸೇರಿದ್ದ ಎಂಟು ಮಳಿಗೆಗಳಿದ್ದ ಹಳೆಯ ಕಟ್ಟಡ ಇದಾಗಿದ್ದು, ಇದರಲ್ಲಿ ವ್ಯಾಪಾರ ಮಾಡುತ್ತಿದ್ದರು. ಕಟ್ಟಡದ ಸಜ್ಜಾ ಬಿದ್ದು ದುರಂತ ಸಂಭವಿಸಿದ್ದು, ಕಟ್ಟಡದ ಅವಶೇಷದಡಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *