Menu

ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಶಿಕ್ಷಕರ ಕಿರುಕುಳವೆಂದು ಆರೋಪ

ಬೀದರ್‌ನ ಪ್ರತಾಪ್ ನಗರದ ಬಳಿಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲೆಯ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ ಬಂದಿದೆ.

ಬುಧವಾರ ಬೆಳಗ್ಗೆ ಶಾಲೆಗೆ ಹೋದಾತ ನಾಲ್ಕನೇ ಮಹಡಿಯಂದ ಹಾರಿ ಮೃತಪಟ್ಟಿದ್ದಾನೆ, ಬಾಲಕ ಆತ್ಮಹತ್ಯೆ ಮಾಡಿಕೊಂಡ ವಿಷಯವನ್ನು ಪೋಷಕರಿಗೆ ಹೇಳದೆ ಮೃತದೇಹವನ್ನು ಶಾಲೆಯ ಆಡಳಿತ ಮಂಡಳಿ ಬ್ರಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿದ್ದಾರೆ ಎನ್ನಲಾಗಿದೆ.

ಪೋಷಕರಿಗೆ ಮಾಹಿತಿ ನೀಡದೆ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  1ನೇ ತರಗತಿಯಿಂದಲೂ ಆತ ಇದೇ ಶಾಲೆಯಲ್ಲಿ ಓದುತ್ತಿದ್ದ. ಹೆಚ್ಚಿನ ಅಂಕ ತೆಗೆದುಕೊಳ್ಳಬೇಕು, ಶಾಲೆಯಲ್ಲಿ ಕಸ ಗೂಡಿಸುವ ಕೆಲಸ ಮಾಡಬೇಕು ಎಂದು ಮುಖ್ಯ ಶಿಕ್ಷಕರು ಕಿರುಕುಳ ನೀಡಿದ್ದಾರೆ. ಹೀಗಾಗಿ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತ ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.

ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಈ ಆರೋಪಗಳನ್ನು ನಿರಾಕರಿಸಿದ್ದು, ಕೇವಲ ಓದುವಂತೆ ಹೇಳಿದ್ದೇವೆಯೇ ಹೊರತು ಯಾವುದೇ ರೀತಿಯ ಕಿರುಕುಳ ನೀಡಿಲ್ಲ ಎಂದು ತಿಳಿಸಿದ್ದಾರೆ.

ಗುಂಡು ಹಾರಿಸಿಕೊಂಡು ಮಹಿಳೆ ಸಾವು

ಮಹಿಳೆ ಗುಂಡು ಹಾರಿಸಿಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ. ಸುಮ (55) ಮೃತಪಟ್ಟ ಮಹಿಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಸುಮ ಪತಿ ರಾಜೇಶ್ ಉದ್ಯಮಿ.

ಸಾವಿನ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ, ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬಸವನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Related Posts

Leave a Reply

Your email address will not be published. Required fields are marked *