Menu

ಚಿತ್ರದುರ್ಗದ ಶಾಲೆಯಲ್ಲಿ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗದ ಭರಮಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ವಸತಿ ಶಾಲೆಯ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡವ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿಯವನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಆತ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭರಮಸಾಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

ಶಿವಮೊಗ್ಗದ ಎಲ್‌ಬಿಎಸ್‌ ನಗರದಲ್ಲಿ ಪಾಲಿಕೆ ನಿರ್ಮಿಸಿದ್ದ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿಯಾಗಿರುವ ಘಟನೆ ನಡೆದಿದೆ. ನಗರದ ಉಲ್ಲಾ (35) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಎಲ್‌ಬಿಎಸ್ ನಗರದ ಫ್ಲೈಓವರ್‌ ಬಳಿ ಹಂಪ್ ಕಾಣದೆ ಉಲ್ಲಾ ಬೈಕ್‌ನಿಂದ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ. ಹಂಪ್ ಕಾಣದೆ ಬೈಕ್‌ನಿಂದ ಬಿದ್ದಿರುವ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತ ಉಲ್ಲಾ ಶಿವಮೊಗ್ಗದ ಸಂಗೀತಾ ಮೊಬೈಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು.

Related Posts

Leave a Reply

Your email address will not be published. Required fields are marked *