Menu

ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶವ ಇಂದು ಬೆಳಗಿನ ಜಾವ ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಗಿದೆ. ಸದಾಶಿವನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಾಣಾವರ ಸಮೀಪದ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿದ್ದ ತೇಜು ತನ್ನ ಪ್ರಿಯಕರನಿಗೆ ಜೀವನ ಸಾಕಾಗಿದೆ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎನ್ನಲಾಗಿದೆ. ತೇಜು ಪೋಷಕರು ವಿಚ್ಛೇದನ ಪಡೆದಿದ್ದು, ತಾಯಿ ಮೆಟ್ರೋದಲ್ಲಿ ಕೆಲಸ ಮಾಡುತ್ತಾರೆ.

ತೇಜು ಅವರ ಕುಟುಂಬಸ್ಥರಿಂದ ಮತ್ತು ಪ್ರಿಯಕರನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಸೋಕೋ ತಂಡ ಭೇಟಿ ನೀಡಿ ಪರಿಶೀಲಿಸಿದೆ.

ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಬೆಂಗಳೂರು ಉತ್ತರದ ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಪಯ್ಯನಗರ ಬಳಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ 28 ವರ್ಷದ ಯುವಕ ಮೃತಪಟ್ಟಿದ್ದಾರೆ.

ವಿನೋದ್ ಮೃತ ಯುವಕ, ಅಣ್ಣನ ಜೊತೆ ಸೇರಿ ಮಾದನಾಯಕನಹಳ್ಳಿಯಲ್ಲಿ ಬೇಕರಿ ನಡೆಸುತ್ತಿದ್ದರು. ಪ್ರತಿದಿನದಂತೆ ಅಂಗಡಿ ಮುಚ್ಚಿಕೊಂಡು ಹೆಸರಘಟ್ಟದಲ್ಲಿರುವ ಮನೆಗೆ ಬೈಕ್‌ನಲ್ಲಿ ವಾಪಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕೆಂಪಯ್ಯನಗರ ಬಳಿ ಎದುರಿನಿಂದ ಬಂದ ಟಿಟಿ ವಾಹನ ವಿನೋದ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ವಾಹನ ಚಾಲಕ ಪರಾರಿಯಾಗಿದ್ದಾನೆ.

ಚಿಕ್ಕಬಾಣಾವರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಾರಿಯಾಗಿರುವ ಟಿಟಿ ವಾಹನ ಹಾಗೂ ಚಾಲಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

Related Posts

Leave a Reply

Your email address will not be published. Required fields are marked *