ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡಿನ ಜೆಎಸ್ಸೆಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.
19 ವರ್ಷದ ಪ್ರಿತೇಶ್ ಜೈನ್ ಮೃತಪಟ್ಟ ವಿದ್ಯಾರ್ಥಿ. ಕಾಲೇಜಿನಲ್ಲಿ ಕೋರ್ಸ್ ಪೂರ್ಣಗೊಳಿಸಿ ಉದ್ಯೋಗಕ್ಕೂ ಆಯ್ಕೆಯಾಗಿದ್ದ ಆತ ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಾಲೇಜು ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಚಾಲಕ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬೆಂಗಳೂರು ನೋಂದಣಿಯ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಯೋಧ ಸಾವು
ರಾಮನಗರ ವ್ಯಾಪ್ತಿಯ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟಿದ್ದಾರೆ.
ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ (45) ಮೃತಪಟ್ಟವರು. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಪಡೆಯ ಯೋಧರಾಗಿದ್ದ ಚನ್ನವೀರೇಗೌಡ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು.
ತಡರಾತ್ರಿ ಮಗನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಡಸಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿದೆ. ಚನ್ನವೀರೇಗೌಡಗೆ ಗಂಭೀರ ಗಾಯಗಳಾಗಿದ್ದು, ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಸೂಕ್ತ ಕನಕಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಪ್ರಕರಣ ದಾಖಲಿಸಿಕೊಂಡಿದ್ದಾರೆ.


