ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ ಹಾಗೂ ಸಹಪಾಠಿಗಳು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮಾದೇಶ್ ಅಸು ನೀಗಿದ್ದಾರೆ.
ಆಟವಾಡುತ್ತಿದ್ದಾಗಲೇ ಕುಸಿದು ವಿದ್ಯಾರ್ಥಿ ಸಾವು
ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಕಿ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೊನ್ನೆಯಷ್ಟೇ ನಡೆದಿದೆ.
ತ್ರಿಲೋಕ್ ಜೈನ್ ಮೃತಪಟ್ಟ ಬಾಲಕ. ಕೊಡನವಳ್ಳಿಯ ಗೌತಮ್ ಮತ್ತು ಶಿಲ್ಪಾ ದಂಪತಿಯ ಮಗ ತ್ರಿಲೋಕ್ ಜೈನ್ ಎಂದಿನಂತೆ ಶಾಲೆಗೆ ಬಂದಿದ್ದ, ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದಾಗ ಕುಸಿದುಬಿದ್ದಿದ್ದಾನೆ. ಶಿಕ್ಷಕರು ಮತ್ತು ಸಿಬ್ಬಂದಿ ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗಮಧ್ಯದಲ್ಲೇ ಮೃತಪಟ್ಟಿದೆ.
ಬಾಡಿಬಿಲ್ಡರ್ ಹೃದಯಾಘಾತಕ್ಕೆ ಬಲಿ
26 ವರ್ಷದ ಯುವ ಬಾಡಿ ಬಿಲ್ಡರ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಮನೆಗೆ ಬಂದ ಕೆಲ ಹೊತ್ತಲ್ಲೇ ಕುಸಿದು ಮೃತಪಟ್ಟಿರುವ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ಎರಡು ದಿನಗಳ ಹಿಂದೆಯಷ್ಟೇ ನಡೆದಿದೆ. ಸುಶೀಲಕುಮಾರ್ ಮೃತ ಬಾಡಿ ಬಿಲ್ಡರ್.
ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಯಾಗಿರುವ ತಾಯಿಯನ್ನು ಡ್ರಾಪ್ ಮಾಡಲು ಮುಂದಾಗಿದ್ದಾಗ ಅಉಶೀಲ ಕುಮಾರ್‌ಗೆ ಇದ್ದಕ್ಕಿದ್ದಂತೆ ತಲೆಸುತ್ತು ಬಂದಿದೆ. ಬಿಪಿ ಲೋ ಆಗಿದೆ, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಸು ನೀಗಿದ್ದರು.


