ಮಹಾರಾಷ್ಟ್ರದ ಯವತ್ಮಾಳ ಜಿಲ್ಲೆಯ ಪುಸದ್ ಪಟ್ಟಣದಲ್ಲಿ ಟ್ಯೂಷನ್ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಗರ್ಭಪಾತಕ್ಕೆ ಮಾತ್ರೆ ಸೇವಿಸಿದ ನಂತರ 12 ನೇ ತರಗತಿಯ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ ಸಂತೋಷ್ ಗುಂಡೇಕರ್‌ನನ್ನು ಪೊಲೀಸರು ಬಂಧಿಸಿದ್ದು, ಗರ್ಭಪಾತ ಮಾತ್ರೆ ನೀಡಿದ ವೈದ್ಯರನ್ನು ಕೂಡ ವಿಚಾರಣೆಗೆ ಒಳಪಡಿಸಿದ್ದಾರೆ. ಮೃತ ವಿದ್ಯಾರ್ಥಿನಿ ಸುಮಾರು ನಾಲ್ಕೂವರೆ ತಿಂಗಳ ಗರ್ಭಿಣಿಯಾಗಿದ್ದಳು, ಕಳಂಕದ ಭಯದಿಂದ ಪೊಲೀಸರಿಗೆ ದೂರು ನೀಡಿರಲಿಲ್ಲ ಎಂದು ಆಕೆಯ ಕುಟುಂಬ ಹೇಳಿದೆ.
ಸಂತ್ರಸ್ತೆಯ ತಂದೆ ನಾಂದೇಡ್‌ನಲ್ಲಿರುವ ವೈದ್ಯರನ್ನು ಸಂಪರ್ಕಿಸಿದಾಗ ವೈದ್ಯರು ಗರ್ಭಪಾತ ಔಷಧಿಗಳನ್ನು ನೀಡಿದ್ದಾರೆ. ಅದನ್ನು ತೆಗೆದುಕೊಂಡ ನಂತರ ಹುಡುಗಿಯ ಆರೋಗ್ಯವು ಹದಗೆಟ್ಟು ತೀವ್ರ ರಕ್ತಸ್ರಾವವಾಗಿದೆ, ಅವಳನ್ನು ತಕ್ಷಣ ಆಸ್ಪತ್ರೆಗೆ ಕರೆದಯ್ಯಲಾಯಿತು, ಆದರೆ ಆಕೆ ಅಲ್ಲಿ ಮೃತಪಟ್ಟಿದ್ದಾಳೆ.
ಟ್ಯೂಷನ್ ಶಿಕ್ಷಕ ಸಂತೋಷ್ ಗುಂಡೇಕರ್ ಮದುವೆಯಾಗುವುದಾಗಿ ಹೇಳಿ ಆಗಾಗ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ. ವಿದ್ಯಾರ್ಥಿನಿ ಸಾಯುವ ಮೊದಲು ಹೇಳಿಕೆ ದಾಖಲಿಸಿದ್ದು, ಪ್ರಕರಣದಲ್ಲಿ ನಿರ್ಣಾಯಕ ಸಾಕ್ಷಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಶಿಕ್ಷಕನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಪುಸದ್ ಪಟ್ಟಣದ ನಿವಾಸಿಗಳು ಆಗ್ರಹಿಸುತ್ತಿದ್ದು, ಸಮಗ್ರ ತನಿಖೆ ನಡೆಯುತ್ತಿದ್ದು, ಅಪರಾಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಪ್ರಕರಣ
ದೆಹಲಿ ಬಾಬಾ ಖ್ಯಾತಿಯ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್-ರಿಸರ್ಚ್ ಕಾಲೇಜು ನಡೆಸುತ್ತಿರುವ ಸ್ವಾಮೀಜಿ ಸ್ಕಾಲರ್‌ಶಿಪ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ವಿಚಾರಣೆ ವೇಳೆ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನಲ್ಲಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನ ಪಡೆಯುತ್ತಿದ್ದ 32 ವಿದ್ಯಾರ್ಥಿನಿಯರ ಹೇಳಿಕೆ ದಾಖಲಿಸಲಾಗಿದೆ.
ಪೊಲೀಸರು ಸಿಸಿಟಿವಿ ಸೇರಿದಂತೆ ಇತರ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ವಾಮೀಜಿ ನಕಲಿ ನಂಬರ್ ಪ್ಲೇಟ್‌ನೊಂದಿಗೆ ರಾಜತಾಂತ್ರಿಕ ವಾಹನ ಬಳಸುತ್ತಿದ್ದ ವಿಚಾರವೂ ಪತ್ತೆಯಾಗಿದ್ದು, ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.