Thursday, September 03, 2026
Menu

ಮದ್ದೂರು ಶಾಲೆಯಲ್ಲಿ ಊಟ ಮಾಡುತ್ತಿದ್ದಾಗಲೇ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಮಂಡ್ಯದ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿರುವ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದಾನೆ.

ಸೋಮನಹಲ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಹೃದಯಾಘಾತಕ್ಕೆ ಬಲಿಯಾದವ. ಶಾಲೆಯಲ್ಲಿ ಮಧ್ಯಾಹ್ನ ಎಂದಿನಂತೆ ಎಲ್ಲರ ಜೊತೆ ಊಟ ಮಾಡುತ್ತಿದ್ದಾಗ ವೀರಮಣಿ ಕುಸಿದು ಬಿದ್ದಿದ್ದಾನೆ.

ಕೂಡಲೇ ಶಿಕ್ಷಕರು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾನೆ.

ಮೂಡಬಿದ್ರೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಮೂಡಬಿದ್ರೆಯ ಕಾಲೇಜಿನಲ್ಲಿ ಓದುತ್ತಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರದ ಪ್ರಶಾಂತ ನಗರದಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಶ್ರೇಯಾ ಎಂದು ಗುರುತಿಸಲಾಗಿದೆ.

ಶ್ರೇಯಾ ಮೂಡಬಿದ್ರೆಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಅನಾರೋಗ್ಯದ ಕಾರಣ ವಾರದ ಹಿಂದೆ ಚಿಕ್ಕಬಳ್ಳಾಪುರದಲ್ಲಿರುವ ಮನೆಗೆ ಬಂದಿದ್ದಳು. ಮನೆಯಲ್ಲಿದ್ದವರು ಹೊರಗೆ ಹೋಗಿದ್ದಾಗ ಶ್ರೇಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ಶ್ರೇಯಾ ತಾಯಿ ನಾಗಲಕ್ಷ್ಮಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಪಿಡಿಒ ಆಗಿದ್ದು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣವೇನು ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *