ಚಿಕ್ಕಮಗಳೂರುಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ವಸತಿ ಶಾಲೆಯ ಹಾಸ್ಟೆಲ್‌ನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೊಪ್ಪ ತಾಲೂಕಿನ ಬೊಮ್ಲಾಪುರ ಗ್ರಾಮದ ಶಮಿತಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗಿನ ಜಾವ ಮಕ್ಕಳು ಎದ್ದಾಗ ತಿಳಿದು ಬಂದಿದೆ.
ಆಕೆ 6ನೇ ತರಗತಿಯಿಂದ ವಸತಿ ಶಾಲೆಯಲ್ಲೇ ಓದುತ್ತಿದ್ದಳು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯ ಬಳಿಕ ಕಾರಣ ತಿಳಿದು ಬರಬೇಕಿದೆ.