Wednesday, October 15, 2025
Menu

ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.33 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್!

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಶೇ.35 ಅಂಕ ಪಡೆಯಬೇಕು ಎಂಬ ಕನಿಷ್ಠ ಅಂಕದ ಮಿತಿಯನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಈ ಮೂಲಕ ಸರಾಸರಿ ಅಂಕ ಪಡೆದು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ.

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಂಕ ಪಡೆಯಲು ಶೇ.35 ಇದ್ದ ಮಿತಿಯಲ್ಲಿ 2 ಅಂಕ ಕಡಿಮೆ ಮಾಡಲಾಗಿದ್ದು, ಶೇ.33ರಷ್ಟು ಅಂಕ ಪಡೆದ ವಿದ್ಯಾರ್ಥಿಗಳು ಪಾಸಾಗಲಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು,  ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದರು.

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನ ತಯಾರು ಮಾಡಿದ್ರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ಅವರು ಹೇಳಿದರು.

ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಶೇ. 33 ಪಾಸಿಂಗ್‌ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ. 33 ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ.

Related Posts

Leave a Reply

Your email address will not be published. Required fields are marked *