Saturday, September 12, 2026
Menu

ವಿದ್ಯಾರ್ಥಿಗಳಿಗೆ ಕಳಪೆ ಶೂ: ಲೋಕಾಯುಕ್ತ ತನಿಖೆ

lokayukta

ರಾಜ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ ಪೂರೈಕೆ ಬಗ್ಗೆ ಮಾಧ್ಯಮ ವರದಿ ಪರಿಗಣಿಸಿದ ಲೋಕಾಯುಕ್ತ ಸ್ವಯ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ವಿದ್ಯಾ ವಿಕಾಸ ಯೋಜನೆಯಡಿ ರಾಜ್ಯದ 36.56 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಸಾಕ್ಸ್‌ ವಿತರಿಸಲು 72 ಕೋಟಿ ರೂಪಾಯಿಗೆ ಮೊತ್ತಕ್ಕೆ ಟೆಂಡರ್ ನೀಡಲಾಗಿತ್ತು. ಟೆಂಡರ್ ಪಡೆದವರು ಕಳಪೆ ಗುಣ ಮಟ್ಟದ ಶೂ ವಿತರಿಸಿದ್ದಾರೆ.

ಪ್ರಕರಣದ ಬಗ್ಗೆ ತನಿಖೆ ನಡೆಸಲು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆಎನ್‌ ಫಣೀಂದ್ರ ಆದೇಶಿಸಿದ್ದಾರೆ. ಪ್ರಕರಣ ಸಂಬಂಧ ಎರಡು ವಾರದಲ್ಲಿ ಪ್ರಾಥಮಿಕ ವರದಿ ಸಲ್ಲಿಸುವಂತೆ ಆಯಾ ಜಿಲ್ಲೆಯ ಲೋಕಾಯುಕ್ತ ಎಸ್ಪಿಗಳಿಗೆ ಸೂಚನೆ ನೀಡಿದ್ದಾರೆ. ಧಾರವಾಡ, ಗದಗ, ಯಾದಗಿರಿ, ಬೆಂಗಳೂರು, ಬೆಂಗಳೂರು ದಕ್ಷಿಣ ಸೇರಿದಂತೆ ಕೆಲವು ಜಿಲ್ಲೆಗಳ ಡಿಡಿಪಿಐ ಮತ್ತು ಬಿಒಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟೆಂಡರ್‌ನಲ್ಲಿ ಏನೇನು ಲೋಪಗಳಾಗಿವೆ, ಕ್ರಿಮಿನಲ್‌ ಚಟುವಟಿಕೆ ನಡೆದಿರುವುದೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ಅಗತ್ಯವಾದರೆ ಪೊಲೀಸರಿಗೂ ದೂರು ನೀಡುವಂತೆ ಸರ್ಕಾರಕ್ಕೆ ವರದಿ ಕೊಡುತ್ತೇವೆ ಎಂದು ಉಪ ಲೋಕಾಯುಕ್ತ ಫಣೀಂದ್ರ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *