Wednesday, January 07, 2026
Menu

ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪ್ರಕರಣ: ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ

supreme court

ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮಾರ್ಚ್ 23ಕ್ಕೆ ಮುಂದೂಡಿದೆ.

ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿತ್ತು.

ಧರ್ಮಸ್ಥಳದಲ್ಲಿ ಅತ್ಯಾಚಾರವಾಗಿ ಕೊಲೆಯಾದ ಸೌಜನ್ಯ ತಾಯಿ ಕುಸುಮವತಿ ಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸಂಜಯ್‌ ಕುಮಾರ್‌ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಿದ್ದು, ವಕೀಲರ ಅನುಪಸ್ಥಿತಿ ಕಾರಣ ವಿಚಾರಣೆ ಮುಂದೂಡಲಾಯಿತು.

ಸತತವಾಗಿ ಎರಡು ವರ್ಷಗಳವರೆಗೆ ನೂರಾರು ಅನಾಥ ಶವಗಳನ್ನು ಹೂತುಹಾಕಿದ್ದಾಗಿ ಈ ಹಿಂದೆ ಹೇಳಿಕೆ ನೀಡಿದ್ದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಹೇಳಿಕೆ ಬದಲಿಸಿದ ಬಗ್ಗೆಯೂ ತನಿಖೆಯಾಗಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಿದ್ದಾರೆ.

ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ 74 ಅನಾಥ ಶವಗಳನ್ನು ಹೂತು ಹಾಕಿರುವ ಆರೋಪಗಳಿದ್ದು, ಎಲ್ಲಾ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ಆಗಿ ತನಿಖೆಯಾಗಬೇಕು. ಧರ್ಮಸ್ಥಳದಲ್ಲಿ ಸಿಕ್ಕ ಅನಾಥ ಶವಗಳು, ನಾಪತ್ತೆ ಪ್ರಕರಣಗಳಿಗೆ ಇದರಿಂದ ಸೂಕ್ತ ನ್ಯಾಯ ಸಿಗುವಂತಾಗಬೇಕು ಎಂದು ಕುಸುಮಾವತಿ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *