Menu

ಶೃಂಗೇರಿ ಮರು ಮತ ಎಣಿಕೆ ರದ್ದುಗೊಳಿಸಿದ ಸುಪ್ರೀಂ: ಕಾಂಗ್ರೆಸ್‌ನ ರಾಜೇಗೌಡ ಶಾಸಕರಾಗಿ ಮುಂದುವರಿಕೆ

supreme court

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ನೀಡಿದೆ. ಹೈಕೋರ್ಟ್ ಸೂಚನೆಯಂತೆ ಇತ್ತೀಚೆಗೆ ನಡೆದಿದ್ದ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಗೆಲುವು ಸಾಧಿಸಿದ್ದರು. ಈಗ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ. ಇದರಿಂದ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ಮಾಜಿ ಶಾಸಕ ಟಿಡಿ ರಾಜೇಗೌಡ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠವು ನಡೆಸಿದೆ. ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ.

https://udayakala.news/sringeri-recount-results-didnt-expect-there-to-be-so-many-criminals-in-the-bjp/

ಟಿ.ಡಿ. ರಾಜೇಗೌಡ ಶಾಸಕರಾಗಿ ಮತ್ತೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ, 2023ರ ಚುನಾವಣೆಯಲ್ಲಿ ರಾಜೇಗೌಡ ಅವರು ಡಿ.ಎನ್‌.ಜೀವರಾಜ್‌ ಅವರ ವಿರುದ್ಧ 201 ಮತಗಳ ಅಂತರದಿಂದ ಜಯ ಗಳಿಸಿದ್ದರು. ಜೀವರಾಜ್‌ ಚುನಾವಣಾ ಅಕ್ರಮಗಳ ಆರೋಪ ಹೊರಿಸಿ ಅಂಚೆ ಮತಗಳ ಮರು ಎಣಿಕೆಗೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪುರಸ್ಕರಿಸಿದ್ದ ಹೈಕೋರ್ಟ್‌, ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಸೂಚಿಸಿತ್ತು.

ಮೇ 2ರಂದು ಅಂಚೆ ಮತಗಳ ಮರು ಎಣಿಕೆ ನಡೆದಿದ್ದು, ರಾಜೇಗೌಡ ಪರಾಭವಗೊಂಡಿದ್ದರು. ರಾಜೇಗೌಡ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್‌ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು ಕೂಡಲೇ ಫಲಿತಾಂಶ ಪ್ರಕಟಿಸಿ ಹೈಕೋರ್ಟ್‌ ಆದೇಶ ಪಾಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸಂಸದ ಪ್ರಲ್ಹಾದ್‌ ಜೋಷಿ ಆಗ್ರಹಿಸಿದ್ದರು.

https://udayakala.news/sringeri-results-it-is-clear-that-bjp-has-committed-a-criminal-conspiracy-and-stolen-votes-cm/

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ 52 ಅಂಚೆ ಮತಗಳು ಬಿಜೆಪಿ ಅಭ್ಯರ್ಥಿ ಡಿ.ಎನ್‌.ಜೀವರಾಜ್‌ ಅವರಿಗೆ ದೊರೆತಿದೆ. ಮತ ಎಣಿಕೆಯಲ್ಲಿ ಯಾರಿಗೆ ಹೆಚ್ಚು ಮತ ಬರುತ್ತದೋ ಅದನ್ನು ಘೋಷಿಸಬೇಕೆಂದು ಕೋರ್ಟ್‌ ಆದೇಶದಲ್ಲಿ ಹೇಳಲಾಗಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೇಳಿದಾಗ, ಹೈಕೋರ್ಟ್‌ಗೆ ಮಾಹಿತಿ ನೀಡುತ್ತೇವೆ ಎಂದು ಸಬೂಬು ಹೇಳಿದ್ದಾರೆ. ಕಾಂಗ್ರೆಸ್‌ ಸರ್ಕಾರ ಚುನಾವಣಾಧಿಕಾರಿಯ ಮೇಲೆ ಒತ್ತಡ ಹೇರಿ ಫಲಿತಾಂಶವನ್ನು ತಡೆಹಿಡಿದಿದೆ. ಈ ಮೂಲಕ ಕೋರ್ಟ್‌ ಆದೇಶ ಉಲ್ಲಂಘಿಸಲಾಗಿದೆ. ಇದು ರಾಜ್ಯದ ಜನತೆಗೆ ಬಗೆದ ದ್ರೋಹ ಎಂದು ಟೀಕಿಸಿದ್ದರು.

ಬಿಜೆಪಿ ಪರವಾಗಿ ಫಲಿತಾಂಶ ಬರಲಿದೆ ಎಂದು ತಿಳಿದಾಕ್ಷಣ ಅಧಿಕಾರಿಗಳು ಉಲ್ಟಾ ಹೊಡೆದಿದ್ದಾರೆ. ಪ್ರತಿ ಬಾರಿ ಅಂಚೆ ಮತಗಳನ್ನು ಮೊದಲು ಎಣಿಸುತ್ತಾರೆ. ಬಳಿಕ ಮತಯಂತ್ರದಲ್ಲಿ ಮತಗಳನ್ನು ಎಣಿಸಲಾಗುತ್ತದೆ. ಆದರೆ ಶೃಂಗೇರಿಯಲ್ಲಿ ಎಲ್ಲವನ್ನೂ ಉಲ್ಟಾ ಪಲ್ಟಾ ಮಾಡಲಾಗಿದೆ, ಚುನಾವಣಾಧಿಕಾರಿ ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದರು.

Related Posts

Leave a Reply

Your email address will not be published. Required fields are marked *