ರೇಣುಕಾಸ್ವಾಮಿ ಕೊಲೆ ಪ್ರಕರಣದ ಮುಖ್ಯ ಆರೋಪಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ದರ್ಶನ್ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ತಿರಸ್ಕರಿಸಿದೆ.
“ಜಾಮೀನು ನೀಡಲು ತೀರಾ ಆತುರವಾಗುತ್ತಿದೆಯಲ್ಲವೇ?” ಎಂದು ಜಡ್ಜ್‌ಗಳು ದರ್ಶನ್ ಪರ ವಕೀಲರಿಗೆ ಪ್ರಶ್ನಿಸಿದ್ದಾರೆ. ಪ್ರತಿದಿನ ದರ್ಶನ್ ವಿಚಾರಣೆ ನಡೆಸಬೇಕು, ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ನಿಯಮ ಪರಕಾರ ಆರೋಪಿಗೆ ಜೈಲಿನಲ್ಲಿ ಎಲ್ಲಾ ಕನಿಷ್ಠ ಸೌಲಭ್ಯ ಒದಗಿಸಬೇಕು ಎಂದು ಪೀಠ ಸೂಚನೆ ನೀಡಿದೆ.
“ಕೇಸ್ ಬೇಗ ಮುಗಿಸುತ್ತೇವೆ. ಆದರೆ ಜಾಮೀನು ನೀಡುವುದು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದ್ದರು. ಜೈಲಿನಲ್ಲಿ ಇತರ ಖೈದಿಗಳಿಂದ ತೊಂದರೆಯಾಗುತ್ತಿದೆ ಎಂದು ದರ್ಶನ್ ಪರ ವಕೀಲರು ವಾದಿಸಿದ್ದರೂ ಕೋರ್ಟ್ ಅದನ್ನು ಪರಿಗಣಿಸಲಿಲ್ಲ.
ದರ್ಶನ್ ಎಂಟು ತಿಂಗಳಿಂದ ಜೈಲಿನಲ್ಲಿದ್ದಾರೆ. ಮಾಹಿತಿಗಳ ಪ್ರಕಾರ ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಸಿಗುವುದು ಬಹುತೇಕ ಕಷ್ಟ ಎನ್ನಲಾಗಿದೆ. ಜಾಮೀನು ತುಂಬಾ ಬೇಗ ಕೇಳುತ್ತಿದ್ದಿರಲ್ಲಾ ಎಂದು ಜಡ್ಜ್ ಪ್ರಶ್ನೆ ಮಾಡಿದ್ದಾರೆ ಎಂಬುದು ಗಮನಾರ್ಹ.


