Wednesday, February 26, 2025
Menu

ಡಿನೋಟಿಫಿಕೇಷನ್ ಪ್ರಕರಣ: ಸಚಿವ ಹೆಚ್‌ಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಹೈಕೋರ್ಟ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ರಾಜೇಶ್ ಬಿಂದಾಲ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಜಾಗೊಳಿಸಿದೆ.

ಕುಮಾರಸ್ವಾಮಿ 2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫಿಕೇಶನ್‌ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ದಾಖಲೆಗಳ ಸಮೇತ ಮಹದೇವಸ್ವಾಮಿ 2012ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಕುಮಾರಸ್ವಾಮಿ ಜೊತೆಗೆ ಪದ್ಮಾ, ಶ್ರೀದೇವಿ, ಚೇತನ್‌ಕುಮಾರ್‌, ಕೆ.ಬಿ ಶಾಂತಮ್ಮ, ಎಸ್‌. ರೇಖಾ ಚಂದ್ರು, ಯೋಗ ಮೂರ್ತಿ, ಬಿ.ನರಸಿಂಹುಲು ನಾಯ್ಡು, ಆರ್‌. ಬಾಲಕೃಷ್ಣ, ಟಿ. ಮುರುಳಿಧರ್‌, ಜಿ. ಮಲ್ಲಿಕಾರ್ಜುನ, ಇ.ಎ ಯೋಗೇಂದ್ರನಾಥ, ಪಿ.ಜಗದೀಶ, ಡಿ.ಎಸ್‌ ದೀಪಕ್‌, ಎಂ.ಸುಬ್ರಮಣಿ, ಬಾಲಾಜಿ ಇನ್ಫ್ರಾ, ಶುಭೋಧಯ ಬಿಲ್ಡರ್ಸ್‌, ಸನ್‌ರೈಸ್‌ ಬಿಲ್ಡರ್ಸ್‌ ಮತ್ತು ಆರತಿ ಡೆವಲಪರ್ಸ್‌ ಪ್ರಮುಖರು ಆರೋಪಿಗಳು.

ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದರು. ಅದನ್ನು ಪ್ರಶ್ನಿಸಿ ದೂರುದಾರ ಮಹಾದೇವಸ್ವಾಮಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್‌ ತಿರಸ್ಕರಿಸಿ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿತ್ತು. ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್‌ಗೆ ಹೋಗಿದ್ದರು. ಸುಪ್ರೀಂಕೋರ್ಟ್​ ಅರ್ಜಿಯನ್ನು ವಜಾಗೊಳಿಸಿದೆ.

Related Posts

Leave a Reply

Your email address will not be published. Required fields are marked *