ಧರ್ಮಸ್ಥಳ ಸೌಜನ್ಯ ಸಾವಿನ ಪ್ರಕರಣದ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಈಗಾಗಲೇ ಖುಲಾಸೆಗೊಳಿಸಿದೆ.
ಇದನ್ನು ಪ್ರಶ್ನಿಸಿ ಸೌಜನ್ಯ ಅವರ ತಾಯಿ ಕುಸುಮಾವತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಬಳಿಕ ಕುಸುಮೌತಿ ಅವರು ಸುಪ್ರೀಂಕೋರ್ಟ್‌ಗೆ ವಿಶೇಷ ಮನವಿ ಸಲ್ಲಿಸಿದ್ದರು.
ತಿಂಗಳ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಂಜಯ್‌ಕುಮಾರ್ ಪೀಠ ತೀರ್ಪು ಕಾಯ್ದಿರಿಸಿತ್ತು. ಇಂದು ಪ್ರಕರಣದ ಮರು ತನಿಖೆಗೆ ಆದೇಶಿಸಿರುವ ಸುಪ್ರೀಂ ಕೋರ್ಟ್, ಹೊಸ ಎಸ್‌ಐಟಿ ರಚಿಸಿ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ಹೇಳಿದೆ.


