ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆಯಲ್ಲಿರುವಾಗಲೇ ಥಗ್ ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ನಟ ಕಮಲ್ ಹಾಸನ್ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ಆದರೆ ಮನವಿಯ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿ, ಹೈಕೋರ್ಟ್ ಆದೇಶ ಬರುವವರೆಗೆ ಕಾಯಲೇಬೇಕು ಎಂದು ಹೇಳಿದೆ.
ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಕಮಲ್ ಹಾಸನ್ ಹೇಳಿಕೆಗೆ ಎಲ್ಲ ಕಡೆಗಳಲ್ಲಿ ವಿರೋಧ ವ್ಯಕ್ತವಾಯಿತು. ಅವರ ನಟನೆಯ ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡದಿರಲು ನಿರ್ಧರಿಸಲಾಯಿತು ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದ ಅವರು, ಸಿನಿಮಾ ರಿಲೀಸ್ ವೇಳೆ ಭದ್ರತೆಗೆ ಮನವಿ ಮಾಡಿದ್ದರು.
ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಇದು ಅಸಾಧ್ಯ, ಕನ್ನಡಿಗರ ಬಳಿ ಕ್ಷಮೆ ಕೇಳಿದರೆ ಮಾತ್ರ ಸಮಸ್ಯೆಗೆ ಪರಿಹಾರ ಎಂದು ಹೇಳಿತ್ತು. ಅರ್ಜಿಯ ವಿಚಾರಣೆ ಜೂನ್ 10ಕ್ಕೆ ಮುಂದೂಡಿಕೆಯಾಗಿದೆ. ಅದಕ್ಕೂ ಮೊದಲೇ ಕಮಲ್ ಹಾಸನ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಥಗ್ ಲೈಫ್ ವಿರುದ್ಧ ಕರ್ನಾಟಕದಲ್ಲಿ ಬೆದರಿಕೆಗಳು ಬರುತ್ತಿವೆ. ಚಿತ್ರ ಪ್ರದರ್ಶನಕ್ಕೆ ಬಿಡುತ್ತಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿ ವಿಚಾರಣೆಗೆ ನ್ಯಾಯಮೂರ್ತಿ ಪಿಕೆ ಮಿಶ್ರಾ ನಿರಾಕರಣೆ ಮಾಡಿದ್ದಾರೆ.