Thursday, December 04, 2025
Menu

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬಿಎಲ್‌ಒಗಳ ಸುರಕ್ಷತೆ ರಾಜ್ಯ ಸರ್ಕಾರಗಳ ಜವಾಬ್ದಾರಿಯೆಂದ ಸುಪ್ರೀಂ

supreme court

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಪ್ರಕ್ರಿಯೆಯಲ್ಲಿ ತೊಡಗಿದ್ದ ಬಿಎಲ್​ಒಗಳ ಸಾವಿನ ಕುರಿತು ಸುಪ್ರೀಂಕೋರ್ಟ್​ ಕಳವಳ ವ್ಯಕ್ತಪಡಿಸಿದ್ದು, ಬಿಎಲ್‌ಒಗಳ ಸುರಕ್ಷತೆ ಮತ್ತು ಕೆಲಸದ ಹೊರೆ ನಿರ್ವಹಣೆ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ.

ಅವರ ಕೆಲಸದ ಹೊರೆ ಕಡಿಮೆ ಮಾಡಲು ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್, ಈ ಒತ್ತಡವು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರಗಳು ಬಿಎಲ್‌ಒಗಳ ಕೆಲಸದ ಸಮಯ ಕಡಿಮೆ ಮಾಡಲು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ನಿರ್ದೇಶಿಸಿದೆ.

ಯಾವುದೇ ಉದ್ಯೋಗಿಗೆ ಕರ್ತವ್ಯದಿಂದ ವಿನಾಯಿತಿ ಪಡೆಯಲು ನಿರ್ದಿಷ್ಟ ಕಾರಣವಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಮನವಿಗಳನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. 10,000 ಜನರನ್ನು ಮಾತ್ರ ನಿಯೋಜಿಸಲಾಗಿರುವ ಸ್ಥಳಗಳಲ್ಲಿ 20,000 ಅಥವಾ 30,000 ಸಿಬ್ಬಂದಿ ನಿಯೋಜಿಸಬಹುದು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.

ಯಾವುದೇ ಬಿಎಲ್‌ಒ ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ಕರ್ತವ್ಯ ನಿರ್ವಹಿಸಲು ಅಸಮರ್ಥರಾಗಿದ್ದರೆ, ರಾಜ್ಯ ಸರ್ಕಾರಗಳು ಎಸ್‌ಐಆರ್ ಕರ್ತವ್ಯಕ್ಕೆ ಬೇರೆ ಉದ್ಯೋಗಿಯನ್ನು ನಿಯೋಜಿಸಬಹುದು ಎಂದು ನ್ಯಾಯಾಲಯ ಹೇಳಿದೆ.

ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ 12 ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಹಲವಾರು ಬಿಎಲ್​ಒಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಹಿರಿಯ ಅಧಿಕಾರಿಗಳಿಂದ ಬಂದ ತೀವ್ರ ಕೆಲಸದ ಒತ್ತಡ ಅವರ ಸಾವಿಗೆ ಕಾರಣವೆಂದು ಕುಟುಂಬಗಳು ಆರೋಪಿಸಿವೆ. ಕಾಂಗ್ರೆಸ್, ಟಿಎಂಸಿ ಮತ್ತು ಎಸ್‌ಪಿ ಸೇರಿದಂತೆ ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಟೀಕಿಸಿವೆ.

Related Posts

Leave a Reply

Your email address will not be published. Required fields are marked *