Menu

ಟಿ-20ಯಲ್ಲಿ 2ನೇ ಅತೀ ವೇಗದ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ

rr

ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಸಿಡಿಸಿ ಈ ಸಾಧನೆ ಮಾಡಿದ ಅತೀ ಕಿರಿಯ ಹಾಗೂ ಐಪಿಎಲ್ ಇತಿಹಾಸದಲ್ಲೇ ಎರಡನೇ ಅತ್ಯಂತ ವೇಗದ ಶತಕದ ದಾಖಲೆ ಬರೆದಿದ್ದಾರೆ.

ಜೈಪುರದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಒಡ್ಡಿದ 210 ರನ್ ಕಠಿಣ ಗುರಿ ಸವಾಲು ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೂರ್ಯವಂಶಿಯ ಅಮೋಘ ಶತಕದ ಬೆಂಬಲ ದೊರೆಯಿತು.

ಐಪಿಎಲ್ ನಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಶತಕ ಸಿಡಿಸಿ ಭರ್ಜರಿ ಆರಂಭ ಮಾಡಿದ್ದ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಪೂರೈಸಿದರು. ಅಂತಿಮವಾಗಿ 38 ಎಸೆತಗಳಲ್ಲಿ 7 ಬೌಂಡರಿ ಮತ್ತು 11 ಸಿಕ್ಸರ್ ಸಹಾಯದಿಂದ 101 ರನ್ ಬಾರಿಸಿದ್ದಾಗ ಕನ್ನಡಿಗ ಪ್ರಸಿದ್ಧ ಕೃಷ್ಣ ಎಸೆತದಲ್ಲಿ ಬೌಲ್ಡ್ ಆಗಿ ಅಮೋಘ ಇನಿಂಗ್ಸ್ ಗೆ ತೆರೆಬಿದ್ದಿತು.

ಎದುರಿಸಿದ ಮೊದಲ ಎಸೆತದಲ್ಲಿಯೇ ಹೊಡಿಬಡಿ ಆಟದಿಂದ ತಂಡಕ್ಕೆ ಮಿಂಚಿನ ಆರಂಭ ನೀಡಿದ ವೈಭವ್ ಮೊದಲ ವಿಕೆಟ್ ಗೆ ಯಶಸ್ವಿ ಜೈಸ್ವಾಲ್ ಜೊತೆ ಮೊದಲ ವಿಕೆಟ್ ಗೆ 11.5 ಓವರ್ ಗಳಲ್ಲಿ 171 ರನ್ ಜೊತೆಯಾಟದಿಂದ ತಂಡಕ್ಕೆ ಗೆಲುವಿನ ಹಾದಿ ಸರಳಗೊಳಿಸಿದರು.

ವೈಭವ್ ಕ್ರಿಕೆಟ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವದಾಖಲೆಗೆ ಪಾತ್ರರಾದರು. ಇದಕ್ಕು ಮುನ್ನ ಪಾಕಿಸ್ತಾನದ ಶಾಹಿದ್ ಅಫ್ರಿದಿ 14 ವರ್ಷದಲ್ಲಿ 37 ಎಸೆತಗಳಲ್ಲಿ ಶತಕ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಕ್ರಿಸ್ ಗೇಲ್ ಆರ್ ಸಿಬಿ ಪರ 30 ಎಸೆತಗಳಲ್ಲಿ ಶತಕ ಸಿಡಿಸಿದ್ದು ಇನ್ನೂ ದಾಖಲೆಯಾಗಿಯೇ ಉಳಿದಿದೆ.

Related Posts

Leave a Reply

Your email address will not be published. Required fields are marked *