Menu

ಬೆಂಗಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಯುವಕನ ಅನುಮಾನಾಸ್ಪದ ಸಾವು

 

ಬೆಂಗಳೂರು ಏರ್‌ಪೋರ್ಟ್‌ ರಸ್ತೆಯ ಮಾಲ್ ಆಫ್ ಏಷ್ಯಾ ಮುಂಭಾಗದ ರಸ್ತೆಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಫ್ಲೈಓವರ್ ಮೇಲಿಂದ ಬಿದ್ದು ಸತ್ತಿರುವ ಶಂಕೆ ವ್ಯಕ್ತವಾಗಿದೆ.

ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಏರ್‌ಪೋರ್ಟ್‌ ರಸ್ತೆ ಫ್ಲೈಓವರ್ ಕೆಳಭಾಗದ ರಸ್ತೆಯಲ್ಲಿ ಯುವಕನ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆದರೆ ಯುವಕನ ಸಾವು ಹೇಗಾಗಿದೆ ಅನ್ನುವ ಬಗ್ಗೆ ಖಚಿತ ಮಾಹಿತಿ ಲಭಿಸಿಲ್ಲ. ಶವ ಪತ್ತೆಯಾದ ಜಾಗದ ಫ್ಲೈ ಓವರ್ ಮೇಲೆ ಅಪರಿಚಿತ ಬೈಕ್ ನಿಲ್ಲಿಸಲಾಗಿದೆ. ಬೈಕ್ ನಲ್ಲಿ ಬಂದು, ಬೈಕ್ ನಿಲ್ಲಿಸಿ ಕೆಳಗೆ ಬಿದ್ದು, ಸತ್ತಿರುವ ಅನುಮಾನ ವ್ಯಕ್ತವಾಗಿದೆ.

ಕೊಡೀಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *