Menu

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನಕ್ಕೆ ಆಗ್ರಹಿಸಿ ಸ್ವಾಮೀಜಿಗಳು ದೆಹಲಿಗೆ

pranavananda

ಕಾಂಗ್ರೆಸ್‌ ಪಕ್ಷಕ್ಕಾಗಿ ದುಡಿದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೂಲಿ ಸಿಗಬೇಕು. ಅವರಿಗೆ ಅತಿ ಶೀಘ್ರ ಮುಖ್ಯಮಂತ್ರಿ ಹುದ್ದೆ ಸಿಗಬೇಕು. ದೆಹಲಿಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್ ಬಳಿ ಒತ್ತಾಯಿಸುವುದಾಗಿ
ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಯಾವ ಯಾವ ಸ್ವಾಮೀಜಿಗಳು ಒತ್ತಾಯಿಸಿದ್ದರೋ ಅಂತಹ ಮಠಕ್ಕೆ ಬಜೆಟ್ನಲ್ಲಿ ನಯಾಪೈಸೆ ನೀಡಲಿಲ್ಲ ಎಂದು ಆರೋಪಿಸಿದ್ದಾರೆ.

ಡಿಕೆ ಶಿವಕುಮಾರ್‌ ಅವರನ್ನು ಸಿಎಂ ಮಾಡಲು ಆಗ್ರಹಿಸಿ ಮೇ ತಿಂಗಳಲ್ಲಿ ವಿವಿಧ ಮಠಾಧೀಶರ ಬೃಹತ್ ಸಭೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಡಿಕೆ ಶಿವಕುಮಾರ್ ಅವರ ಡೇಟ್ ಕೇಳೋದಕ್ಕೆ ಅವರನ್ನು ಭೇಟಿಯಾಗಿದ್ದು, ಒಪ್ಪಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತೇವೆ ಎನ್ನುವ ಕಾರಣಕ್ಕೆ ನಮ್ಮ ಸಮುದಾಯದ ಯಾವುದೇ ಬೇಡಿಕೆಯನ್ನು ಸಿದ್ದರಾಮಯ್ಯ ನೆರವೇರಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

.ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಪರ ಮಾತಾಡಿದ ಸ್ವಾಮೀಜಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಸಿಎಂ ಪರವಾಗಿ ಮಾತನಾಡಿದ ಸ್ವಾಮೀಜಿಗಳಿಗೆ ಭೂಮಿ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕೆಂದು ಒತ್ತಾಯಿಸಿ ಹದಿನೈದು ಸ್ವಾಮೀಜಿಗಳು ದೆಹಲಿಗೆ ಪ್ರಯಾಣ ಬೆಳೆಸಲಿದ್ದೇವೆ ಎಂದು ಹೇಳಿದ್ದಾರೆ. ಕೆಸಿ ವೇಣುಗೋಪಾಲ್ ಜೊತೆಗೆ ಈಗಾಗಲೇ ದೂರವಾಣಿಯಲ್ಲಿ ಮಾತುಕತೆ ನಡೆಸಿರುವುದಾಗಿ ಸ್ವಾಮೀಜಿ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *