ನವದೆಹಲಿ: 2028ರಲ್ಲಿ ಲಾಸ್ ಏಂಜಲೆಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಅನ್ನು ಅಧಿಕೃತವಾಗಿ ಸೇರಿಸಲಾಗಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ತನ್ನ ಸಭೆಯಲ್ಲಿ ಈ ನಿರ್ಧಾರವನ್ನು ಘೋಷಿಸಿದೆ. ಕ್ರಿಕೆಟ್‌ನ ಜಾಗತಿಕ ಜನಪ್ರಿಯತೆಯನ್ನು ಗಮನಿಸಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
1900ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಪಂದ್ಯ ನಡೆದ ಬಳಿಕ, 128 ವರ್ಷಗಳ ನಂತರ ಈ ಕ್ರೀಡೆ ಮತ್ತೆ ಒಲಿಂಪಿಕ್ಸ್‌ಗೆ ಮರಳುತ್ತಿದೆ. ಲಾಸ್ ಏಂಜಲೆಸ್ ಒಲಿಂಪಿಕ್ಸ್‌ನಲ್ಲಿ ಟಿ20 ಕ್ರಿಕೆಟ್‌ನ ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ತಲಾ 6 ತಂಡಗಳು ಸ್ಪರ್ಧಿಸಲಿವೆ.
ತಂಡಗಳ ಆಯ್ಕೆಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ರ?ಯಾಂಕಿಂಗ್ ಅಥವಾ ಅರ್ಹತಾ ಸ್ಪರ್ಧೆಗಳ ಆಧಾರದ ಮೇಲೆ ನಡೆಯಲಿದೆ. 1900ರಲ್ಲಿ ಇಂಗ್ಲೆಂಡ್ ಮತ್ತು ಫ್ರಾನ್ಸ್ ನಡುವೆ ನಡೆದ ಕ್ರಿಕೆಟ್ ಪಂದ್ಯದ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಕಾಣಿಸಿಕೊಂಡಿರಲಿಲ್ಲ. ಈಗ ಮತ್ತೆ ಈ ಕ್ರೀಡೆಗೆ ಸ್ಥಾನ ಸಿಕ್ಕಿರುವುದು ಐತಿಹಾಸಿಕ ಕ್ಷಣವಾಗಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ನಿರ್ಧಾರವನ್ನು ಸ್ವಾಗತಿಸಿದ್ದು, ಕ್ರಿಕೆಟ್‌ಗೆ ಜಾಗತಿಕ ಪ್ರಸಾರಕ್ಕೆ ಇದು ಸಹಾಯಕವಾಗಲಿದೆ ಎಂದು ಹೇಳಿದೆ. ಐಸಿಸಿ ಕೂಡ ಈ ಸೇರ್ಪಡೆಗೆ ಪ್ರಮುಖ ಪಾತ್ರ ವಹಿಸಿದ್ದು, ಹಲವು ವರ್ಷಗಳಿಂದ ಈ ಪ್ರಯತ್ನದಲ್ಲಿತ್ತು. ಒಲಿಂಪಿಕ್ ಸಮಿತಿಯ ಈ ನಿರ್ಧಾರದಿಂದ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಗಟ್ಟಿಯಾಗಿ ನೆಲೆ ನೆಲ್ಲಲು ಕ್ರಿಕೆಟ್‌ಗೆ ನೆರವಾಗಲಿದೆ ಎಂದು ನಂಬಲಾಗಿದೆ.
ಈ ನಿರ್ಧಾರವು ಕ್ರಿಕೆಟ್ ಕ್ರೀಡೆಗೆ ವಿಶ್ವಮಟ್ಟದಲ್ಲಿ ಹೊಸ ಗತಿಯನ್ನು ನೀಡಲಿದೆ. ಅನೇಕ ಕ್ರಿಕೆಟಿಗರು ಒಲಿಂಪಿಕ್ ಪದಕವನ್ನು ಗುರಿಯಾಗಿಟ್ಟುಕೊಂಡು ತಮ್ಮ ಆಟಕ್ಕೆ ಹೊಸ ಉತ್ಸಾಹ ತುಂಬಿಕೊಳ್ಳುವ ಸಾಧ್ಯತೆಯಿದೆ.