ಮುಂಬರುವ ಟಿ-೨೦ ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದ್ದ ಗಾಯಗೊಂಡಿರುವ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅರ್ಗಕರ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸ್ಪಿನ್ ಆಲ್ ರೌಂಡರ್ ಅಕ್ಸರ್ ಪಟೇಲ್ ಉಪನಾಯಕರಾಗಿ ಬಡ್ತಿ ಪಡೆದಿದ್ದಾರೆ.
ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಟ್ಟಿರುವುದು ಮಾತ್ರವಲ್ಲ, ಉಪನಾಯಕ ಸ್ಥಾನದಿಂದಲೂ ಕೊಕ್ ನೀಡಲಾಗಿದೆ. ವಿಕೆಟ್ ಕೀಪರ್ ಜಿತೇಶ್ ಕುಮಾರ್ ಅವರನ್ನು ಕೂಡ ತಂಡದಿಂಧ ಕೈಬಿಡಲಾಗಿದ್ದು, ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಲಾಗಿದೆ.
ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಸರ್ ಪಟೇಲ್ (ಉಪ ನಾಯಕ), ಅಭಿಷೇಕ್ ಶರ್ಮ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಸ್ ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ರಿಂಕು ಸಿಂಗ್.


