ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಫೆಬ್ರವರಿ 15ರಂದು ಮುಖಾಮುಖಿ ಆಗಲಿವೆ.
ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಮಂಗಳವಾರ ಪ್ರಕಟಿಸಿದ್ದು, ಶ್ರೀಲಂಕಾದ ಕೊಲೊಂಬೊದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಫೆಬ್ರವರಿ 15ರಂದು ಎದುರಾಗಲಿವೆ.
ಫೆಬ್ರವರಿ 7ರಂದು ಕೊಲೊಂಬೊದಲ್ಲಿ ಉದ್ಘಾಟನೆ ಮತ್ತು ಮಾರ್ಚ್ 8ರಂದು ಗುಜರಾತ್ ನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಕೋಲ್ಕತಾ ಮತ್ತು ಮುಂಬೈನಲ್ಲಿ ಸೆಮಿಫೈನಲ್ ಪಂದ್ಯಗಳು ನಡೆಯಲಿವೆ.
ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನೆದರ್ಲೆಂಡ್ ಮುಖಾಮುಖಿ ಆಗಲಿವೆ. ಒಂದು ವೇಳೆ ಪಾಕಿಸ್ತಾನ ಫೈನಲ್ ಪ್ರವೇಶಿಸಿದರೆ ಫೈನಲ್ ಪಂದ್ಯ ಕೊಲೊಂಬೊದಲ್ಲಿ ನಡೆಯಲಿದೆ.


