Menu

ಕೆಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ, ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಸಂಪೂರ್ಣ ಸುರಕ್ಷಿತ: 𝗜𝗜𝗦𝗰 ವರದಿ

ಕೆಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ, ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಅತ್ಯುತ್ತಮ ಗುಣಮಟ್ಟದ್ದಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (𝗜𝗜𝗦𝗰) ವಿಜ್ಞಾನಿಗಳ ಸುದೀರ್ಘ ಸಂಶೋಧನೆಗಳಿಂದ ದೃಢಪಟ್ಟಿದೆ. ಈ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸಣ್ಣ ನೀರಾವರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಸಚಿವರಾದ ಕೃಷ್ಣ ಭೈರೇಗೌಡ,