ಸಂತೋಷ್ ಕೊಡೆಂಕೇರಿ
ರವಿಕೆ ಪ್ರಸಂಗ ನಂತರ ಉತ್ತರ ಕರ್ನಾಟಕದ ಕಾಮಿಡಿ-ಡ್ರಾಮಾ ಸಿನಿಮಾ ಘೋಷಿಸಿದ ನಿರ್ದೇಶಕ ಸಂತೋಷ್ ಕೊಡೆಂಕೇರಿ!
ಫಾರ್ಮುಲಾಗಳ ಹಿಂದೆ ಓಡದೇ, ಕಥೆಗಳನ್ನು ಕಟ್ಟುವ ಪ್ರಯತ್ನವೇ ತಮ್ಮ ಸಿನಿಮಾಗಳ ಮೂಲ ತತ್ವ ಎಂದು ಹೇಳುವ ನಿರ್ದೇಶಕ ಸಂತೋಷ್ ಕೊಡೆಂಕೇರಿ, ರವಿಕೆ ಪ್ರಸಂಗ ಚಿತ್ರದ ನಂತರ ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಉತ್ತರ ಕರ್ನಾಟಕದ ಬದುಕು, ಸಂಸ್ಕೃತಿ ಮತ್ತು ದೈನಂದಿನ ಜೀವನವನ್ನು ಆಧರಿಸಿದ ಸಾಮಾಜಿಕ ಕಾಮಿಡಿ-ಡ್ರಾಮಾ ಚಿತ್ರವನ್ನು ರೂಪಿಸುತ್ತಿದ್ದಾರೆ. ಈ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಅವರ ಪತ್ನಿ ಹಾಗೂ ಲೇಖಕಿ ಪಾವನಾ ಸಂತೋಷ್ ಬರೆಯುತ್ತಿದ್ದಾರೆ. ಸಾಮಾನ್ಯ


