Menu

ಅತಿ ಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು: ಸಚಿವ ಹೆಚ್‌ಡಿಕೆ  ಪ್ರಶ್ನೆ

ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ,  ಅತಿಹಿಂದುಳಿದ ‌2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಜಾತಿ ಗಣತಿ ರಾಜಕೀಯ ಫಸಲಿಗೆ ಹೊಂಚು ಹಾಕಿರುವ ಸಿದ್ದರಾಮಯ್ಯನವರೇ  ಸತ್ಯವನ್ನೇ ಹೇಳಿ