2nd round seat announcement
ವೃತ್ತಿಪರ ಕೋರ್ಸ್‌ಗಳ ಪ್ರವೇಶ 2 ನೇ ಸುತ್ತಿನ ಸೀಟು ಪ್ರಕಟ: ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ
ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶ ಹೊರಬಿದ್ದ ನಂತರ ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಈ ಕೋರ್ಸ್‌ಗಳಿಗೆ ಸೀಟು ಹಂಚಿಕೆಯಾದವರಿಗೆ ಯಾವುದೇ ಛಾಯ್ಸ್ ಆಯ್ಕೆಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ.


