Monday, September 15, 2025
Menu

ದಿಲ್ಲಿ ಅಸೆಂಬ್ಲಿ: ಸದನದಿಂದ ಎಎಪಿ ಶಾಸಕರ ಅಮಾನತು

ದೆಹಲಿ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ ಸಮಯದಲ್ಲಿ ಘೋಷಣೆ ಕೂಗಿದ್ದಕ್ಕೆ ವಿರೋಧ ಪಕ್ಷದ ನಾಯಕರಾದ ಅತಿಶಿ, ಮಾಜಿ ಸಚಿವ ಗೋಪಾಲ್ ರೈ ಮತ್ತು ಇತರ ಒಂಬತ್ತು ಮಂದಿ ಎಎಪಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ದಿನದ ಮಟ್ಟಿಗೆ ಅಮಾನತುಗೊಳಿಸಿದ್ದಾರೆ. ಮುಖ್ಯಮಂತ್ರಿ ಕಚೇರಿಯಿಂದ ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಬಿಜೆಪಿ ಸಂವಿಧಾನ ರಚನೆಕಾರನಿಗೆ ಅಗೌರವ ತೋರಿದೆ ಎಂದು ಸದನ