ABVP activists arrest
ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಕದ್ದು ವೀಡಿಯೊ ರೆಕಾರ್ಡ್: ಎಬಿವಿಪಿ ಕಾರ್ಯಕರ್ತರು ಅರೆಸ್ಟ್
ಮಧ್ಯಪ್ರದೇಶದ ಸರ್ಕಾರಿ ಕಾಲೇಜಿನಲ್ಲಿ ಕಾಲೇಜು ಯುವಜನೋತ್ಸವ ವೇಳೆ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿದ್ದ ಕೋಣೆಯ ಕಿಟಕಿ ಮೂಲಕ ಕದ್ದು ಇಣುಕಿ ವೀಡಿಯೊ ರೆಕಾರ್ಡ್ ಮಾಡಿದ ಮತ್ತು ಪೋಟೊ ತೆಗೆಯುತ್ತಿದ್ದ ಮೂವರು ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂದ್ಸೌರ್ ಜಿಲ್ಲೆಯ ಭಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳ ಕೃತ್ಯ ಗೊತ್ತಾಗುತ್ತಿದ್ದಂತೆಯೇ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ. ಪ್ರಾಂಶುಪಾಲರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ ಪೊಲೀಸರಿಗೆ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎಬಿವಿಪಿ ನಗರಾಧ್ಯಕ್ಷ ಉಮೇಶ್


