Menu

ಮಧ್ಯರಾತ್ರಿ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ: ವ್ಯಕ್ತಿ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರಿನ ನಾಗರಬಾವಿಯ ಹೋಟೆಲ್‌ವೊಂದರಲ್ಲಿ ತಡರಾತ್ರಿ ಅಗ್ನಿ ಆಕಸ್ಮಿಕ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಹೋಟೆಲ್‌ನಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೋಟೆಲ್ ಒಳಗೆ ಸಿಲುಕಿದ್ದವರನ್ನು ಭೀಮ, ಶಿವಾನಂದ, ಸತೀಶ್ ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ.ಅಸ್ವಸ್ಥರಾಗಿದ್ದ 45 ವರ್ಷದ

ಅಪಘಾತದಲ್ಲಿ ಮಹಿಳೆಯ ಸಾಯಿಸಿ ಮನೆಯಿಂದ ಹಣ ದೋಚಿದ್ದವರ ಬಂಧನ

ಹಣಕ್ಕಾಗಿ ಮಹಿಳೆಯೊಬ್ಬರಿಗೆ ಉದ್ದೇಶಪೂರ್ವಕವಾಗಿ ಅಪಘಾತ ಮಾಡಿ ಕೊಲೆಗೈದಿರುವ ಘಟನೆ ಏಪ್ರಿಲ್ 21ರಂದು ಬೆಂಗಳೂರಿನ ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದಿದೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಲಾಗಿತ್ತು. ಮಹಾಲಕ್ಷ್ಮಿ ಲೇಔಟ್ ಪೊಲೀಸರ ತನಿಖೆಯಿಂದಾಗಿ ವ್ಯವಸ್ಥಿತ ಕೊಲೆ ಎಂಬುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ

ಕೊರಳಿಗೆ ಸುತ್ತಿಕೊಂಡ ಜೋಕಾಲಿಗೆ ಶಿವಮೊಗ್ಗದಲ್ಲಿ ಬಾಲಕಿ ಬಲಿ

ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುತ್ತಿದ್ದಾಗ ಕುಣಿಗೆ ಕುತ್ತಿಗೆಗೆ ಬಿಗಿದು ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೂರು ದಿನಗಳ ಹಿಂದೆ ಈ ದುರಂತ ಸಂಭವಿಸಿದು, ತಡವಾಗಿ ಬಹಿರಂಗಗೊಂಡಿದೆ. ಒಂಬತ್ತು ವರ್ಷದ ಪ್ರಣಮ್ಯ ಮೃತಪಟ್ಟ ಬಾಲಕಿ. ಬೇಸಿಗೆ ರಜೆಯ ಕಾರಣ ವಿದ್ಯಾನಗರದಿಂದ ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ

ಮಗನ ಸಾಧನೆಯ ಸಂಭ್ರಮಕ್ಕೆ ಉಜ್ಜಯಿನಿಯಿಂದ ಬಂದ ತಂದೆ ಆಳಂದದಲ್ಲಿ ಅಪಘಾತಕ್ಕೆ ಬಲಿ

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ (ಇ ಆಂಡ್ ಸಿ) ವಿಭಾಗದಲ್ಲಿ ಮಗ ಚಿನ್ನದ ಪದಕ ಸ್ವೀಕರಿಸುವುದನ್ನು ಕಣ್ತುಂಬಿಕೊಳ್ಳಲೆಂದು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಬಂದ ತಂದೆ ಆಳಂದದಲ್ಲಿ ಆಟೊ ಉರುಳಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಮಗ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎರಡು

ಚಿಕ್ಕಮಗಳೂರಿನಲ್ಲಿ ಕೊರಳಿಗೆ ಸುತ್ತಿಕೊಂಡ ಜೋಕಾಲಿ ಸೀರೆ: ಬಾಲಕಿ ಸಾವು

ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಹತ್ತು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೇಖನಾ ಮೃತಪಟ್ಟ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ತನ್ನ ಮದುವೆಗೆ ಆಹ್ವಾನಿಸಲೆಂದು ಹೋದಾತ ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್‌ಗೆ ಬಲಿ

ಬೆಂಗಳೂರಿನ ಹುಳಿಮಾವು ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಯುವಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಡೆದಿದ್ದು, ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನು ನೋಡುತ್ತಾ ನಿಂತಿದ್ದ

ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಹೋಗಿದ್ದ ಟೆಕ್ಕಿ ಭದ್ರಾ ನದಿ ಪಾಲು

ಚಿಕ್ಕಮಗಳೂರು ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ವ್ಯಕ್ತಿ ಅಭಿಷೇಕ್ (27)ಗದಗದವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಭಿಷೇಕ್ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಇತರ

ಹಾವೇರಿಯಲ್ಲಿ ಟ್ರ್ಯಾಕ್ಟರ್‌ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು

ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ. ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಬಾಲಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಸ್ಥಳದಲ್ಲೇ ಅಸು ನೀಗಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ

ಗೂಗಲ್‌ ಮ್ಯಾಪ್‌ ತೋರಿಸಿದಂತೆ ಸಂಚರಿಸಿದ ಲಾರಿ ಮನೆ ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿ: ಕಾರೊಳಗಿದ್ದ ಚಾಲಕ ಸಜೀವ ದಹನ

ಬೆಂಗಳೂರು ನಗರದ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ನಿಯಂತ್ರಣ ತಪ್ಪಿದ ಲಾರಿಯೊಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಅನುಸರಿಸಿ