Menu
12

ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ, ಬಸವರಾಜ ಕುರಟ್ಟಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗ್‌ರಾಜ್​ನ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಇಂದು (ಸೋಮವಾರ) ಬೆಳಗಿನ ಜಾವ ಅಪಘಾತ ಸಂಭವಿಸಿದೆ. ಕ್ರೂಸರ್ ನಿಂತಿದ್ದ ಬಸ್​ಗೆ

ಬಿಎಂಟಿಸಿ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಕುಟುಂಬಕ್ಕೆ 1.5 ಕೋಟಿ ರೂ. ಪರಿಹಾರ

ಇನ್ನು ಮುಂದೆ ಬಿಎಂಟಿಸಿ ನೌಕರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಅವರ ಕುಟುಂಬಕ್ಕೆ 1.50 ಕೋಟಿ ರೂ. ಪರಿಹಾರ ಲಭಿಸಲಿದೆ. ಕೆಎಸ್​ಆರ್​​ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟರೆ ಅವರ ಕುಟುಂಬದವರಿಗೆ 1 ಕೋಟಿ ರೂ. ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿಯ ನೌಕರರು ಆಕ್ಸಿಡೆಂಟ್​ನಲ್ಲಿ ಪ್ರಾಣ ಕಳೆದುಕೊಂಡರೆ

ಅಪಘಾತದಲ್ಲಿ  ಮನು ಭಾಕರ್  ಅಜ್ಜಿ, ಚಿಕ್ಕಪ್ಪ ಸಾವು

ಹರಿಯಾಣಾದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್‌ಗೆ  ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಮೃತರಾಗಿದ್ದಾರೆ. ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಮೃತಪಟ್ಟವರು. ಯುಧವೀರ್

ನಿಯಂತ್ರಣ ತಪ್ಪಿದ ಲಾರಿಗೆ ಇಬ್ಬರು ಬಲಿ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ. ಲಾರಿ ಕಬ್ಬಿಣದ ಸಾಮಾನುಗಳನ್ನು ತುಂಬಿಕೊಂಡು ಸಾಗರದಿಂದ ಹೊನ್ನಾವರ