Menu

ಸಾಯಲು ಹೋಗಿದ್ದ ಮಗನ ಉಳಿಸಲು ಯತ್ನಿಸಿ ತಂದೆಯೂ ಸಾವು

ಜಗಳವಾಡಿ ಸಾಯಲು ಹೋಗಿದ್ದ ಮಗನನನ್ನು ಉಳಿಸಲು ಹೋದ ವ್ಯಕ್ತಿ ಮೇಲೆ ರೈಲು ಹರಿದು ತಂದೆ-ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ದೇವರಿಯಾದಲ್ಲಿ ನಡೆದಿದೆ. ಗೋರಖ್‌ಪುರ-ಛಾಪ್ರಾ ರೈಲು ವಿಭಾಗದ ಗೌರಿಬಜಾರ್ ಪಶ್ಚಿಮ ರೈಲ್ವೆ ಕ್ರಾಸಿಂಗ್ ಬಳಿ ಈ ದುರಂತ ಸಂಭವಿಸಿದೆ. ಗೌರಿಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಉದ್ಯೋಗ್ ನಗರದ ನಿವಾಸಿಗಳಾದ ಶ್ರವಣ್ ಜೈಸ್ವಾಲ್ (55) ಮತ್ತು ರ ಮಗ ರಾಕೇಶ್ ಜೈಸ್ವಾಲ್ (24) ಶುಕ್ರವಾರ ರಾತ್ರಿ ದ್ವಿಚಕ್ರವಾಹನದಲ್ಲಿ ಮಾರುಕಟ್ಟೆಗೆ ಹೋಗಿದ್ದಾಗ ಅವರ

ದೇಗುಲದಿಂದ ವಾಪಸಾಗುತ್ತಿದ್ದಾಗ ವಾಹನ ತೆರೆದ ಬಾವಿಗೆ ಉರುಳಿ ಎಂಟು ಮಂದಿ ಸಾವು

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.  ಘಟನೆಯಲ್ಲಿ ಅಪಘಾತದಲ್ಲಿ ಏಳು ಜನರು ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪಂಢರಪುರ ಮೂಲದ

ಬೆಂಗಳೂರಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳು: ನಾಲ್ವರ ಸಾವು

ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ತಾಯಿ-ಮಗಳು ಹೋಗುತ್ತಿದ್ದ ಬೈಕ್ ಮಳೆ ನೀರಲ್ಲಿ ಸ್ಕಿಡ್‌ ಆಗಿ ರಸ್ತೆಗೆ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದು ತೀವ್ರ ಗಾಯಗೊಂಡಿದ್ದ ತಾಯಿ ಕಾಂತಮ್ಮ ಮೃತಪಟ್ಟಿದ್ದಾರೆ. ಮಗಳು ನೇಹಾ ಸ್ಥಿತಿ ಕೂಡ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ

ಬೈಕ್‌ಗೆ ಲಾರಿ ಡಿಕ್ಕಿ: ಇಬ್ಬರ ಸಾವು

ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಮಹಿಳೆ, ಪುರುಷ ಮೃತಪಟ್ಟಿದ್ದು, ಸ್ಥಳಕ್ಕೆ ಯಶವಂತಪುರ ಸಂಚಾರ

ವಿಶಾಖಪಟ್ಟಣದಲ್ಲಿ ಕುದಿಯುತ್ತಿದ್ದ ಉಕ್ಕು ಕಾರ್ಮಿಕರ ಮೇಲೆ ಬಿದ್ದು ಎಂಟು ಮಂದಿ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ನಲ್ಲಿ ಕ್ರೇನ್ ಮೂಲಕ ಸಾಗಿಸುತ್ತಿದ್ದ ಕುದಿಯುತ್ತಿದ್ದ ಉಕ್ಕು ಕಾರ್ಮಿಕರ ಮೇಲೆ ಬಿದ್ದು ಕನಿಷ್ಠ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಕುದಿದು ಕರಗಿದ ಉಕ್ಕು ಕ್ಯಾಸ್ಟಿಂಗ್ ಕಾರ್ಯಾಚರಣೆ ವೇಳೆ ಸೋರಿಕೆಯಾಗಿ

ಚಿಕ್ಕನಾಯಕನಹಳ್ಳಿಯಲ್ಲಿ ಕಾರುಗಳು ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

ಎರಡು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟಟ್ಟಿರುವ ದಾರುಣ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಈ ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ

ಉತ್ತರಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಆರು ಕಾರ್ಮಿಕರ ಸಾವು

ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಬೆಟ್ಟಾ ನದಿ ಮೇಲೆ‌ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಆರು ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆಯಿದ್ದು, ಸಾವಿನ ಸಂಖ್ಯೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಆಡಳಿತ ಮತ್ತು

ಚಿತ್ರದುರ್ಗದಲ್ಲಿ ಕಾರು ಟೈರ್‌ ಸ್ಫೋಟಗೊಂಡು ಐವರ ಸಾವು

ಚಿತ್ರದುರ್ಗದಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್‌ ಮೃತಪಟ್ಟವರು.

ರಾಯಬಾಗದಲ್ಲಿ ಆಟೊ-ಬೈಕ್‌ ಡಿಕ್ಕಿ: ಒಂದೇ ಕುಟುಂಬದ ಮೂವರು ಬಲಿ

ಬೆಳಗಾವಿಯ ರಾಯಬಾಗ ರೈಲು ನಿಲ್ದಾಣದ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಮಹಾಂತೇಶ್ ಮಾನೆ, ಪತ್ನಿ ಸಾಕ್ಷಿ ಮಾನೆ

ಚಿತ್ತಾಪುರದಲ್ಲಿ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ

ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ನಡೆದಿರುವ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45),