Menu

ಟ್ರ್ಯಾಕ್ಟರ್‌ನಲ್ಲಿ ಹುಲಿಗೆಮ್ಮ ದರ್ಶನಕ್ಕೆ ಹೋಗುತ್ತಿದ್ದಾಗ ಟ್ಯಾಂಕರ್‌ ಡಿಕ್ಕಿ: ಏಳು ಮಂದಿ ಸಾವು

ದೇವಿಯ ವಾರವೆಂದು ಮುನಿರಾಬಾದ್‌ನ ಹುಲಿಗೆಮ್ಮತಾಯಿ ದರ್ಶನಕ್ಕೆ ಹೊರಟವರು ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಹೃದಯವಿದ್ರಾವಕ  ಘಟನೆ  ಕೊಪ್ಪಳ-ವಿಜಯನಗರ ಜಿಲ್ಲೆಯ ಗಡಿಭಾಗದ ಮುನಿರಾಬಾದ್ ಸೇತುವೆ ಬಳಿ ಶುಕ್ರವಾರ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ಹಾಗೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾನಳ್ಳಿಯಿಂದ ಹಲವು ಜನರು ಟ್ರ್ಯಾಕ್ಟರ್‌ನಲ್ಲಿ ಹುಲಿಗೆಮ್ಮದೇವಿ ದರ್ಶನಕ್ಕೆಂದು ಹೊರಟಿದ್ದರು. ಇನ್ನೈದು-ಹತ್ತು ನಿಮಿಷಗಳಲ್ಲಿ ದೇವಿಯ ಸನ್ನಿಧಾನದಲ್ಲಿರಬೇಕಿತ್ತು. ಅಷ್ಟರಲ್ಲಿ  ಟ್ಯಾಂಕರ್ ರೂಪದಲ್ಲಿ ಬಂದ ಜವರಾಯ ಮಸಣದ ಪಾಲಾಗುವಂತೆ ಮಾಡಿದ. ಮುಂದಿದ್ದ ಟ್ರ್ಯಾಕ್ಟರ್‌ಗೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪಲ್ಟಿಯಾಗಿ ತಂದೆ, ಮಗ ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮಂಡ್ಯ ಕೋಣನಹಳ್ಳಿ ಬಳಿಯ ಸೇತುವೆಯ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರಣ್(40) ಮತ್ತು ಮಗ

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 21ಮಂದಿಯ ಸಾವು

ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ ಈ ದುರಂತ ಸಂಭವಿಸಿದೆ. 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 61 ಮಂದಿ

ಜಾತ್ರೆಯಿಂದ ಬರುತ್ತಿದ್ದಾಗ ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಇಬ್ಬರ ಸಾವು

ರಾಯಚೂರಿನ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟಿದ್ದಾರೆ. ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ

ಭಾಲ್ಕಿಯಲ್ಲಿ ಸಿಡಿಲಿಗೆ ಯುವಕರಿಬ್ಬರು ಬಲಿ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಯುವ ರೈತರು ಮೃತಪಟ್ಟಿದ್ದಾರೆ. ನಾವದಗಿ ಗ್ರಾಮದ ರೇವಣಸಿದ್ದ (28) ಮತ್ತು ಜೇವರ್ಗಿಯ ಯಲ್ಲಾಲಿಂಗ (28) ಸಿಡಿಲಿಗೆ ಬಲಿಯಾವರು. ಗುರುವಾರ ಸಂಜೆ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಮಳೆ ಶುರುವಾಗಿದೆ.

ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ: ಕಾರವಾರದಲ್ಲಿ ಇಬ್ಬರ ಸಾವು

ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಗಂಭೀರ ಗಾಯಗೊಂಡ ಘಟನೆ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ. ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತಪಟ್ಟವರು.

ಬೆಳಗಾವಿಯಲ್ಲಿ ಟ್ರಕ್‌ಗೆ ಗೂಡ್ಸ್‌ ವಾಹನ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂರಾರು ಕೋಳಿಗಳು ಕೂಡ ಸತ್ತು ಹೋಗಿವೆ. ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಬಳಿ ರಾಷ್ಟ್ರೀಯ

ಉಧಂಪುರದಲ್ಲಿ ಬಸ್‌ ಉರುಳಿ 15 ಮಂದಿ ಸಾವು

ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ರಾಮನಗರದಿಂದ ಉಧಂಪುರಕ್ಕೆ

ಮದುವೆಗೆಂದು ಹುಡುಗಿ ನೋಡಲು ಹೋಗುತ್ತಿದ್ದ ಕುಟುಂಬ ಹೊಸಪೇಟೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ

ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸು ನೀಗಿದ್ದು, ಹಲವರು ಗಾಯಗೊಂಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಗನ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದಾಗ ಈ ದುರಂತ

ಅರಸೀಕೆರೆಯಲ್ಲಿ ಕೆರೆಗೆ ಬಿದ್ದ ಅಳಿಯನ ರಕ್ಷಿಸಲು ಹೋದ ಮಾವನೂ ನೀರುಪಾಲು

ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯೊಂದು ಹಾಸನದ ಅರಸೀಕೆರೆ ತಾಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಪ್ರತೀಕ್ ಹಾಗೂ ಮಾವ 45 ವರ್ಷದ ಪ್ರಭಾಕರ್ ಮೃತಪಟ್ಟವರು. ಪ್ರತೀಕ್ ಬೇಸಿಗೆ ರಜೆಯಲ್ಲಿ ಮಾವ