Menu

ನಾಟಕ ನೋಡುತ್ತಿದ್ದವರ ಮೇಲೆ ಕುಸಿದ ಗೋಡೆ: ಮಕ್ಕಳಿಬ್ಬರ ಸಾವು

ರಾಯಚೂರು ಜಿಲ್ಲೆಯ ಮಾನ್ವಿ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. ಏಳು ಜನರು ಕಮಾನು ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಈ ವೇಳೆ ಕಮಾನಿನ ಗೋಡೆ ಕುಸಿದಿದೆ. ಸ್ಥಳದಲ್ಲೇ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಮಹಿಳೆಯರಿಗೆ ಗಂಭೀರ

ಸುರಪುರದಲ್ಲಿ ಬಸ್‌ ಕಾರು ಡಿಕ್ಕಿ: ಏಳು ಮಂದಿ ಸಜೀವ ದಹನ

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಮತ್ತು ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಂಚರಿಸುತ್ತಿದ್ದ ಕಾರು ನಡುವೆ ಯಾದಗಿರಿ ‌ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ  ಕಾರಿಗೆ  ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ

ಮನೆಯಲ್ಲಿ ಸಂಗ್ರಹಿಸಿದ್ದ ಸ್ಫೋಟಕ ಸಿಡಿದು ನಾಲ್ವರ ಸಾವು

ಬಾಡಿಗೆ ಮನೆಯಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸಿಡಿದು ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ದಾರುಣ ಘಟನೆಯೊಂದು ಆಂಧ್ರ ಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಕದಿರಿ ಮಂಡಲದ ಕುಮ್ಮರವಂದ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಫೋಟಕಗಳನ್ನು ಇರಿಸಲಾಗಿತ್ತು ಎನ್ನಲಾದ ಬಾಡಿಗೆ ಮನೆಯಲ್ಲಿ

ಮಂತ್ರಾಲಯ ಸನ್ನಿಧಿಗೆ ತೆರಳುತ್ತಿದ್ದ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ: ಚಿಕ್ಕಮಗಳೂರಿನ ಎಂಟು ಮಂದಿ ಸಾವು

ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಿಕ್ಕಮಗಳೂರಿನ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶ್ರೀ ಗುರು ರಾಘವೇಂದ್ರ ಸನ್ನಿಧಿ ಮಂತ್ರಾಲಯ ಕ್ಷೇತ್ರದಲ್ಲಿ ಗುರುಗಳ ದರ್ಶನಕ್ಕಾಗಿ ತೆರಳುತ್ತಿದ್ದ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು

ರೀಲ್ಸ್‌ ಹುಚ್ಚು: ಜಲಪಾತದಲ್ಲಿ ಮುಳುಗಿ ಮೂವರು ಯುವತಿಯರ ಸಾವು

ಆಂಧ್ರಪ್ರದೇಶದಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮುಲ್ಲುಂಗುಮ್ಮಿ ಜಲಪಾತ ಬಳಿ ರೀಲ್ಸ್‌ ಮಾಡಲು ಹೋಗಿದ್ದ ಮೂವರು ಯುವತಿಯರು ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ರೀಲ್ಸ್ ಮಾಡುತ್ತಿದ್ದಂತೆಯೇ‌ ಕ್ಯಾಮೆರಾ ಮುಂದೆಯೇ ಮುಳುಗಿ ಮೃತಪಟ್ಟಿದ್ದಾರೆ. 17 ವರ್ಷದ ತ್ರಿಶಾ, 16 ವರ್ಷದ ರತ್ನ ಕುಮಾರಿ, 16

ಹುಲಿಕಲ್‌ ಘಾಟ್‌ ಗುಡ್ಡ ಕುಸಿತ: ಮೂವರು ಕಾರ್ಮಿಕರ ಶವಗಳೂ ಪತ್ತೆ

ಶಿವಮೊಗ್ಗದ ಹುಲಿಕಲ್‌ ಘಾಟ್‌ನಲ್ಲಿ ಗುಡ್ಡ ಕುಸಿದು ಮೃತಪಟ್ಟಿದ್ದವರಲ್ಲಿ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದೆ. ಇಬ್ಬರ ಶವ ಈಗಾಗಲೇ ಪತ್ತೆಯಾಗಿತ್ತು. ಶುಕ್ರವಾರ ಮುಂಜಾನೆ 3 ಗಂಟೆ ಕಾರ್ಮಿಕ ಶಬ್ಬೀರ್ (40) ಮೃತದೇಹ ಸಿಕ್ಕಿದೆ. ಘಾಟ್‌ನ ಹೇರ್ ಪಿನ್ ಕ್ರಾಸ್ ನಲ್ಲಿ ಕಾಂಕ್ರೀಟ್ ವಾಲ್

ಬೆಂಗಳೂರಿನ ಮೂವರು ವಿಜಯಪುರ ಕೆರೆಯಲ್ಲಿ ಮುಳುಗಿ ಸಾವು

ಬೆಂಗಳೂರಿನಿಂದ ವಿಜಯಪುರ ಪ್ರವಾಸಕ್ಕೆ ಬಂದಿದ್ದವರಲ್ಲಿ ಮೂವರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಜಯಪುರ ನಗರ ಹೊರವಲಯದ ಭೂತನಾಳ ಕೆರೆಯಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಬೆಂಗಳೂರಿನ ಆರ್.ಟಿ ನಗರದ ಬಾಲಕ ಮಹಮ್ಮದ್ ಹಯಾತ್, ಅಬ್ದುಲ್ ಖುದ್ದುಸ್ ಹಾಗೂ ಹೈದರ್ ಪಾಶಾ ಎಂದು ಗುರುತಿಸಲಾಗಿದೆ.

ಮಹಿಳೆ ಆತ್ಮಹತ್ಯೆ: ವಿಷಯ ತಿಳಿದು ಆಸ್ಪತ್ರೆಗೆ ಬರುತ್ತಿದ್ದ ಪತಿ ಅಪಘಾತದಲ್ಲಿ ಸಾವು

ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಆಸ್ಪತ್ರೆಗೆ ಆಗಮಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ನಡೆದಿದೆ. ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ (36) ಮೃತ ದಂಪತಿ.‌ ಮಧುರಾ ಹೊಟ್ಟೆನೋವಿನಿಂದ

ನಾಸಿಕ್‌ನಲ್ಲಿ ರಾತ್ರಿ ಕಾರು ಬಾವಿಗೆ ಉರುಳಿ ಒಂದೇ ಕುಟಂಬದ 9 ಜನ ಸಾವು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಕಾರೊಂದು ಬಾವಿಗೆ ಉರುಳಿ ಬಿದ್ದು, ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಂದುವರಿದಿದೆ.

ಬಳ್ಳಾರಿಯ ನವ ವಿವಾಹಿತ ಜೋಡಿ ಅಪಘಾತಕ್ಕೆ ಬಲಿ

ಮದುವೆಯಾಗಿ ಒಂದು ತಿಂಗಳಷ್ಟೇ ಆಗಿದ್ದ ಬಳ್ಳಾರಿಯ ನವಜೋಡಿಯೊಂದು ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳು ಮದುವೆಯಾಗಿದ್ದರು.