accident deaths
ಚೆನ್ನೈನಲ್ಲಿ ಬಸ್ ಟೈರ್ ಸ್ಫೋಟ: ಕಾರುಗಳಿಗೆ ಡಿಕ್ಕಿಯಾಗಿ ಏಳು ಮಂದಿ ಸಾವು
ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಟೈರ್ ತೂತುಕುಡಿ ಬಳಿ ಸ್ಫೋಟಗೊಂಡು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. ಮೃತರಲ್ಲಿ 5 ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ. ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ಟೈರ್ ಸ್ಫೋಟಗೊಂಡು ಬಸ್ ಚಲಿಸುತ್ತಿದ್ದ ದಿಕ್ಕನ್ನೇ ಬದಲಿಸಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು
ಹಿರಿಯೂರಿನಲ್ಲಿ ಬಸ್-ಲಾರಿ ಡಿಕ್ಕಿ: 17 ಮಂದಿ ಸಂಜೀವ ದಹನ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಅವಘಡ ಸಂಭವಿಸಿದ
ಬಳ್ಳಾರಿಯಲ್ಲಿ ಕಿರು ಸೇತುವೆಗೆ ಕಾರು ಡಿಕ್ಕಿ: ದೇವಸ್ಥಾನದಿಂದ ವಾಪಸಾಗುತ್ತಿದ್ದ ಮೂವರ ಸಾವು
ಬಳ್ಳಾರಿಯಲ್ಲಿ ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ಕಾರಿನಲ್ಲಿ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಈ ಅಪಘಾತ
ಆನೇಕಲ್‌ನಲ್ಲಿ ಸರಣಿ ಅಪಘಾತ: ಇಬ್ಬರು ಬಲಿ, ಚಾಲಕನ ಥಳಿಸಿದ ಸಾರ್ವಜನಿಕರು
ಬೆಂಗಳೂರಿನ ಹೊರವಲಯ ಆನೇಕಲ್‌ನಲ್ಲಿ ಕಂಟೈನರ್ ಚಾಲಕ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು ಎರಡು ಮಂದಿ ಮೃತಪಟ್ಟಿದ್ದಾರೆ, ಐದಕ್ಕೂ ಹೆಚ್ಚು ಮಂದಿ ಗಂಬೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಲ್ಲಿಸಿದ್ದ ವಾಹನ, ಚಲಿಸುತ್ತಿದ್ದ ವಾಹನಗಳ ಮೇಲೆ ಕಂಟೈನರ್ ಹರಿದಿದೆ. ವಾಹನಗಳಿಗೆ ಡಿಕ್ಕಿಯಾದರೂ
ಗ್ಯಾಸ್ ಗೀಸರ್ ಸೋರಿಕೆ: ಬೆಂಗಳೂರಿನಲ್ಲಿ ತಾಯಿ ಮಗು ಸಾವು
ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗು ಮೃತಪಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಇಬ್ಬರೂ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜಲ್ಲಿಕಲ್ಲು ಸಾಗಿಸುತ್ತಿದ್ದ ಲಾರಿ ಕಾರಿನ ಮೇಲೆ ಉರುಳಿ ಒಂದೇ ಕುಟುಂಬದ 7 ಜನ ಸಾವು
ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಲಾರಿ ಕಾರಿನ ಮೇಲೆ ಉರುಳಿ ಒಂದೇ ಕುಟುಂಬದ ಏಳು ಜನ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದೆ. ಲಾರಿಯಲ್ಲಿದ್ದ ಜಲ್ಲಿಕಲ್ಲು ಕಾರಿನ ಮೇಲೆ
ಹಿರಿಯೂರಿನಲ್ಲಿ ರಸ್ತೆ ಅಪಘಾತ: ಇಬ್ಬರ ಸಾವು
ಚಿತ್ರದುರ್ಗದ ಹಿರಿಯೂರು ತಾಲೂಕಿನ ಇಂಡಸ್ ಕಟ್ಟೆಯಲ್ಲಿ ಕಬ್ಬಿಣ ತುಂಬಿದ ಲಾರಿಗೆ ಹಿಂಬದಿಯಿಂದ ಕೋಳಿ ತುಂಬಿದ ಬುಲೆರೊ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರಿನ ತಿಪಟೂರು ನಿವಾಸಿಗಳಾದ ಚಂದನ್ ಗೌಡ( 22), ಕುಮಾರ್ (17) ಮೃತಪಟ್ಟವರು. ಬುಲೆರೊ ಚಾಲಕನ ಅತಿ ವೇಗ
ತಂಗಿಯ ಆರತಕ್ಷತೆ ಸಂಭ್ರಮದಲ್ಲಿದ್ದ ಯುವಕರಿಬ್ಬರು ಬೇಲೂರಿನಲ್ಲಿ ಅಪಘಾತಕ್ಕೆ ಬಲಿ
ಬೇಲೂರು ತಾಲೂಕಿನ ಮುತ್ತಗನ್ನೆ ಗ್ರಾಮದ ಬಳಿ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಬೇಲೂರು ಹೊನ್ನೇನಹಳ್ಳಿ ಗ್ರಾಮದ ಲೋಕೇಶ್ (25), ಚಿಕ್ಕಮಗಳೂರು ಮೇನಹಳ್ಳಿ ಗ್ರಾಮದ ಕಿರಣ್ (32) ಮೃತಪಟ್ಟ ಯುವಕರು. ಗುರುವಾರ (ಇಂದು) ಲೋಕೇಶ್ ತಂಗಿ
ಮಾಲೂರಿನಲ್ಲಿ ಬ್ರಿಡ್ಜ್‌ನಿಂದ ಉರುಳಿದ ಕಾರು: ಸ್ಥಳದಲ್ಲೇ ನಾಲ್ವರು ಯುವಕರ ಸಾವು
ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬ್ರಿಡ್ಜ್ ಮೇಲಿನಿಂದ ಉರುಳಿ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯುವಕರು ಚೆನ್ನೈನವರಾಗಿದ್ದು, ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27),
ಕಾರು ಡಿಕ್ಕಿಯಾಗಿ ಉರಿದ ಬೈಕ್: ಕಲಬುರಗಿಯಲ್ಲಿ ಸವಾರರಿಬ್ಬರು ಸಜೀವ ದಹನ
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿ ಬೆಂಕಿಹೊತ್ತಿಕೊಂಡು ಅದರಲ್ಲಿದ್ದ ಸವಾರರಿಬ್ಬರು ಸಜೀವ ದಹನಗೊಂಡಿದ್ದಾರೆ. ಸಿರಗಾಪುರ ಗ್ರಾಮದ ಆಕಾಶ ಧನವಂತ (19) ಮತ್ತು ಭೂಸಣಗಿ ಗ್ರಾಮದ ಸುಶೀಲ್ (28) ಬೆಂಕಿಗೆ ಬಲಿಯಾದವರು. ಮಹಾಗಾಂವ್




