Accused arrest
ದುಬೈನಿಂದ ತಂದ ನಿಷೇಧಿತ ಇ-ಸಿಗರೇಟ್ ನೆಲಮಂಗಲದಲ್ಲಿ ಜಪ್ತಿ, ಆರೋಪಿಗಳು ಅರೆಸ್ಟ್
ದುಬೈನಿಂದ ತಂದ ನಿಷೇಧಿತ ಇ-ಸಿಗರೇಟ್ಗಳನ್ನು ಸಾಗಿಸುತ್ತಿದ್ದ ಗ್ಯಾಂಗ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. 50 ಲಕ್ಷ ರೂ. ಬೆಲೆಬಾಳುವ ಇ-ಸಿಗರೇಟ್ಗಳನ್ನು ಜಪ್ತಿ ಮಾಡಲಾಗಿದ್ದು, 3 ಕಾರು ಗಳು, ಮೊಬೈಲ್ ಫೋನ್ಗಳು ಸೇರಿದಂತೆ ಒಟ್ಟು 60 ಲಕ್ಷಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೆಲಮಂಗಲದಿಂದ ಮಂಗಳೂರು ಕಡೆಗೆ ರಾಷ್ಟ್ರೀಯ
ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: ಬಿಹಾರದಲ್ಲಿ ಆರೋಪಿ ಅರೆಸ್ಟ್
ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಬೆಂಗಳೂರು ಪೊಲೀಸರು ಬಿಹಾರ ಮೂಲದ ವಿಕಾಸ್ ಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಪೊಲೀಸರೇ ಈ ಸೈಬರ್ ಖದೀಮರ ಜಾಲ ನೋಡಿ ಬೆಚ್ಚಿ
ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಸಿಎಂ ಪರಿಹಾರ ನಿಧಿ ಪಡೆಯುತ್ತಿದ್ದ ಆರೋಪಿ ಅರೆಸ್ಟ್
ನಕಲಿ ವೈದ್ಯಕೀಯ ದಾಖಲೆಗಳನ್ನು ಸೃಷ್ಟಿಸಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣ ಪಡೆಯುತ್ತಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನೆಲಮಂಗಲದ ಧನಂಜಯ (59) ಬಂಧಿತ ಆರೋಪಿಯಾಗಿದ್ದು, ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ನೀಡಲಾಗುವ ಆರ್ಥಿಕ ಸಹಾಯ ಪಡೆಯಲು ನಕಲಿ ಆಸ್ಪತ್ರೆ ಬಿಲ್ಗಳು ಮತ್ತು
EPFO ಸ್ಟಾಫ್ ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ
ಬೆಂಗಳೂರಿನ PFO ಸ್ಟಾಫ್ ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ .ವಂಚನೆ ಪ್ರಕರಣ ಬಯಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೆರಡು ದಿನದಲ್ಲಿ ಪ್ರಕರಣದ ಪ್ರಾಥಮಿಕ ತನಿಖೆ ಬಳಿಕ ಸಿಐಡಿಗೆ ವರ್ಗಾವಣೆಯಾಗಲಿದೆ. ಸದ್ಯ ಪ್ರಕರಣದ ತನಿಖೆಯನ್ನು ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್
ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಗ್ಯಾಂಗ್: ಮೂವರು ಪೊಲೀಸ್ ವಶ
ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಗ್ಯಾಂಗ್ವೊಂದನ್ನು ಬಯಲಿಗೆಳೆದಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಈ ಗ್ಯಾಂಗ್ ಜೊತೆ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ
ಕೊಡಿಗೆಹಳ್ಳಿಯಲ್ಲಿ ಸಮೀಕ್ಷೆಗೆ ಹೋದ ಶಿಕ್ಷಕಿಯ ಕೂಡಿಹಾಕಿದ್ದವನ ಬಂಧನ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಮನೆಯ ಕಾಂಪೌಂಡ್ನಲ್ಲಿ ಕೂಡಿ ಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ಧಾರೆ. ಕೊಡಿಗೆಹಳ್ಳಿಯ ಸಂದೀಪ್ (30) ಬಂಧಿತ ಆರೋಪಿ, ಶಿಕ್ಷಕಿ ಸುಶೀಲಮ್ಮ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ
ಮೈಸೂರಿನಲ್ಲಿ ಬಲೂನ್ ಮಾರುತ್ತಿದ್ದ ಬಾಲಕಿಯ ಅತ್ಯಾಚಾರ ಕೊಲೆ: ಆರೋಪಿಗೆ ಪೊಲೀಸ್ ಗುಂಟೇಟು
ಮೈಸೂರು ದಸರಾದಲ್ಲಿ ಬಲೂನ್ ಮಾರಾಟಕ್ಕೆ ಬಂದಿದ್ದ ಗುಲ್ಬರ್ಗದ ಹಕ್ಕಿಪಿಕ್ಕಿ ಸಮುದಾಯದ ಹತ್ತು ವರ್ಷದ ಬಾಲಕಿಯ ಅತ್ಯಾಚಾ ರಮತ್ತು ಕೊಲೆ ಪ್ರಕರಣದ ಆರೋಪಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟು ಕೆಡವಿ ವಶಕ್ಕೆ
ತುಮಕೂರಿನಲ್ಲಿ ಮಗುವಿಗೆ ಜನ್ಮವಿತ್ತ ಅಪ್ರಾಪ್ತ ವಯಸ್ಕ ಬಾಲಕಿ: ಆರೋಪಿ ಅರೆಸ್ಟ್
ತುಮಕೂರಿನಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸಲು ಕಾರಣನಾದ ಆರೋಪದಡಿ ಮೇಲೆ ವಿನಯ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 15 ವರ್ಷದ ಬಾಲಕಿಯನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ
ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್
ರಾಮನಗರದ ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರೇಗಪ್ಪ ಬಂಧಿತ ಆರೋಪಿ. ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ
ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್
ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ವಾಟ್ಸಾಪ್ ಮೂಲಕ ಬಾಲಕಿಯರ ವೀಡಿಯೊವನ್ನು ಗ್ರಾಹಕರಿಗೆ ತೋರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.




