Menu

ಕಾಟನ್‌ಪೇಟೆಯಲ್ಲಿ ಮಹಿಳೆಯ ಕೊಲೆಗೈದಿರುವ ಸಂಬಂಧಿಕರು ಅರೆಸ್ಟ್‌

ಬೆಂಗಳೂರಿನ ಕಾಟನ್‌ಪೇಟೆಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕೊಂದು ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಪ್ರಕರಣದ ಆರೋಪಿಗಳಿಬ್ಬರು ಮೃತ ಮಹಿಳೆಯ ಸಂಬಂಧಿಗಳೇ ಆಗಿದ್ದು, ಪೊಲೀಸರು ಬಂಧಿಸಿದ್ದಾರೆ. ಬೀದರ್‌ನ ಮಹಿಳೆ ಲತಾ ಎಂಬ ಮಹಿಳೆಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪುರಂದರ ಮತ್ತು ಆತನ ಸ್ನೇಹಿತ ಶಿವಪ್ಪ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯವರಾದ ಪುರಂದರ ಮತ್ತು ಶಿವಪ್ಪ ಕೆಮಿಕಲ್ ಫಾರ್ಮಸ್ಯೂಟಿಕಲ್ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದರು. ಇಬ್ಬರೂ ಮದ್ಯವ್ಯಸನಿಗಳಾಗಿದ್ದು, ಕ್ರಿಕೆಟ್ ಬೆಟ್ಟಿಂಗ್,

ಬೆಳಗಾವಿ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌: ಸರ್ಕಲ್‌ ಇನ್ಸ್‌ಪೆಕ್ಟೆರ್‌ ಪುತ್ರನ ಬಂಧನ

ಬೆಳಗಾವಿಯಲ್ಲಿ ಅಪ್ರಾಪ್ತ ವಯಸ್ಸಿನ 15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕರಿಬ್ಬರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ರಾಜ್ಯದ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಪಿಐ ಒಬ್ಬರ ಅಪ್ರಾಪ್ರ ವಯಸ್ಕ ಪುತ್ರ ಕೂಡ

ಮೈಸೂರಲ್ಲಿ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ 1.5 ಲಕ್ಷ ವಸೂಲಿ ಮಾಡಿದ್ದಾತ ಸೆರೆ

ಹುಣಸೂರು ನಗರದ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡಿ 1.5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋಗಿ ಗ್ರಾಮದ ವೀರೇಶ್ ಕುಮಾರ್ 28 ಬಂಧಿತ ಆರೋಪಿ. ಆರೋಪಿಯು ವಾಟ್ಸಪ್ ಮೂಲಕ ಪರಿಚಯವಾಗಿದ್ದ

ದಾಂಡೇಲಿಯಲ್ಲಿ ನಕಲಿ ನೋಟು: ಆರೋಪಿ ಲಕ್ನೋದಲ್ಲಿ ಸೆರೆ

ಕಾರವಾರದ ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆಯೊಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣದ  ಆರೋಪಿಯನ್ನು ಪತ್ತೆ ಹಚ್ಚಿ  ಲಕ್ನೋದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗೋವಾ,ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ ಅರ್ಷದ್ ಅಂಜುಂ ಖಾನ್‌ನನ್ನು ಉತ್ತರ ಪ್ರದೇಶದ ಲಖನೌನಲ್ಲಿ ಬಂಧಿಸಿ

ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ ಅರೆಸ್ಟ್‌

ಚಿನ್ನ ದರೋಡೆ ಪ್ರಕರಣದಲ್ಲಿ ಕೆಜಿಎಫ್ ನಗರಸಭೆ ಸದಸ್ಯ, ಕೆಜಿಎಫ್ ಕಾಂಗ್ರೆಸ್ ಮುಖಂಡ ಜಯಪಾಲ್​ ಎಂಬವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಚೆನ್ನೈನಿಂದ ಕೆಜಿಎಫ್​ಗೆ ಬರುತ್ತಿದ್ದ ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ತಂಡವೊಂದು ಏಪ್ರಿಲ್

ಪಿಯುಸಿ, ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ: ಮೂವರ ಬಂಧನ

ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್​ಎಸ್​ಎಲ್​​ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು.

ಬಾಲಕಿಗೆ ಬಲವಂತವಾಗಿ ಮದುವೆ ಮಾಡಿ ಕರೆದೊಯ್ದ ಆರೋಪಿಗಳ ಬಂಧನ

ರಾಜ್ಯದ ಗಡಿಭಾಗ ತಮಿಳುನಾಡಿಗೆ ಸೇರಿರುವ ಅಂಚೆಟ್ಟಿ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ ಮಾಡಿ, ಬಾಲಕಿ ಬರುವುದಿಲ್ಲ ಎಂದು ಕಿರುಚಾಡಿದರೂ ಕುಟುಂಬಸ್ಥರು ಆಕೆಯನ್ನು ಹೊತ್ತೊಯ್ದ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ವೈರಲ್‌ ಆಗಿದ್ದು, ಆರೋಪಿಗಳು ಮದುವೆ ಮಾಡಿ ಬಾಲಕಿ

ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಯಸ್ಕ ಬಾಲಕಿ, ಆರೋಪಿಯ ಬಂಧನ

ಯಲ್ಲಾಪುರದ ಮೂಲದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಮುಂಡಗೋಡ ತಾಲೂಕಿನ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದಳು. ಈ

ಹಾಸನ ರೈಲು ನಿಲ್ದಾಣದಲ್ಲಿ ಅಪರಿಚಿತೆಯ ಅತ್ಯಾಚಾರ, ಕೊಲೆ ಆರೋಪಿ ಸೆರೆ

ಹಾಸನದ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಅತ್ಯಾಚಾರ ನಡೆಸಿ ತಲೆಗೆ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ನೇಪಾಳಿ  ಕೂಲಿಕಾರ್ಮಿಕನನ್ನು  ಅರಸೀಕೆರೆ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಮೊರಾಂಗ್ ಜಿಲ್ಲೆಯ ಮೌಸಮ್ ಪಹಡಿ(25)ಬಂಧಿತ ಆರೋಪಿ.  ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ

ಚಿನ್ನ ಕಳ್ಳಸಾಗಣೆ: ಐಪಿಎಸ್‌ ಅಧಿಕಾರಿಯ ಹತ್ತಿರದ ಸಂಬಂಧಿ ಪೊಲೀಸ್‌ ವಶ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿಯೊಬ್ಬರ ಹತ್ತಿರದ ಸಂಬಂಧಿಯನ್ನು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡಿಆರ್‌ಐ (ಡೈರೆಕ್ಟೊರೇಟ್‌ ಆಪ್‌ ರೆವಿನ್ಯು ಇಂಟೆಲಿಜೆನ್ಸ್‌) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೇರೆ ದೇಶದಿಂದ ದೆಹಲಿ ಮೂಲಕ ಚಿನ್ನ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಐಪಿಎಸ್‌ ಅಧಿಕಾರಿಯ ಹತ್ತಿರದ