accused boys
ಚನ್ನಗಿರಿಯಲ್ಲಿ ಕಳವು ಆರೋಪಿ ಬಾಲಕರ ಕಟ್ಟಿಹಾಕಿ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ
ಕಳ್ಳತನ ಮಾಡಿದ್ದಲ್ಲದೆ ಅಸಭ್ಯ ವರ್ತನೆ ತೋರಿದ್ದಾರೆಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿರುವುದು ಬಹಿರಂಗಗೊಂಡಿದೆ. ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್ 4ರಂದು ಘಟನೆ ನಡೆದಿದ್ದು, ಚಿತ್ರಹಿಂಸೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಸುದ್ದಿವಾಹಿನಿಯೊಂದು ಈ ವಿಷಯ ಪ್ರಸಾರ ಮಾಡುತ್ತಿದ್ದಂತೆ ಪೊಲೀಸರು 9 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದು,