accused of fraud
ಸರ್ಕಾರಕ್ಕೆ 150 ಕೋಟಿ ವಂಚನೆ ಆರೋಪ: ಕೆಎಎಸ್ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
ಅರೆ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದಡಿ ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಜೂನ್ 30ರಂದು ಈ ಸಂಬಂಧ ಪತ್ರ ಬರೆಯಲಾಗಿದ್ದು, ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್ ದಾಖಲಿಸಿ ತುರ್ತಾಗಿ ಅನುಪಾಲನಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.