accused Rajiv Gowda
ತಲೆ ಮರೆಸಿಕೊಂಡಿರುವ ಆರೋಪಿ ರಾಜೀವ್ ಗೌಡ ಮಂಗಳೂರಿನಿಂದಲೂ ಪರಾರಿ
ಶಿಡ್ಲಘಟ್ಟ ಪೌರಾಯುಕ್ತರೊಂದಿಗೆ ಅವಹೇಳನಕಾರಿಯಾಗಿ ಮಾತನಾಡಿ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ರಾಜೀವ್ ಗೌಡ ತಲೆ ಮರೆಸಿಕೊಂಡು ಮಂಗಳೂರಿಗೆ ಹೋಗಿದ್ದು, ಈಗ ಅಲ್ಲಿಂದಲೂ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಬಂಧನ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಪರಮೇಶ್ವರ್ ಆರೋಪಿಯನ್ನು ಶೀಘ್ರ ಬಂಧಿಸುವುದಾಗಿ ಹೇಳಿದ್ದಾರೆ. ಆರೋಪಿ ಕೆಲವು ದಿನಗಳಿಂದ ಮಂಗಳೂರಿನಲ್ಲಿದ್ದ ಬಗ್ಗೆ ಮಾಹಿತಿ ದೊರೆತಿದೆ. ಆದರೆ ಈಗ ಅಲ್ಲಿಂದಲೂ ಪರಾರಿಯಾಗಿರುವುದಾಗಿ ಹೇಳಲಾಗುತ್ತಿದೆ. ಸಿಸಿ ಕ್ಯಾಮರಾ ದೃಶ್ಯಾವಳಿಗಳ ಆಧಾರದಲ್ಲಿ


