accused teacher
ಸಿರಿಗೆರೆ ಮಠದ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನ ವಿರುದ್ಧ ಪ್ರಕರಣ
ಚಿತ್ರದುರ್ಗ: ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಅಧೀನದಲ್ಲಿರುವ ಸಿರಿಗೆರೆಯ ಶ್ರೀ ನೀಲಾಂಬಿಕಾ ಬಾಲಿಕಾ ಪ್ರೌಢಶಾಲೆಯ ಆರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ಎಂ. ರಂಗಣ್ಣ ವಿರುದ್ಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆರೋಪಿ ಎಂ.ರಂಗಣ್ಣ ಸಿರಿಗೆರೆಯ ಶ್ರೀ ನೀಲಾಂಬಿಕಾ ಬಾಲಿಕಾ ಪ್ರೌಢಶಾಲೆಯಲ್ಲಿ ಶಿಕ್ಷಕನಾಗಿದ್ದು, 10ನೇ ತರಗತಿಯ ಆರು ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕೊಠಡಿಗೆ ಕರೆಸಿ ಅಪ್ಪಿಕೊಳ್ಳುವುದು, ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸುವುದು, ಮುತ್ತು ಕೊಡುವುದು ಸೇರಿದಂತೆ ಅಶ್ಲೀಲವಾಗಿ


