Menu

ಅಭಿವೃದ್ಧಿಯೇ ನಮ್ಮ ತಂದೆ ತಾಯಿ, ಗ್ಯಾರಂಟಿಗಳೇ ಬಂಧು ಬಳಗ: ಡಿ.ಕೆ.ಶಿವಕುಮಾರ್

“ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ಕನಕಪುರ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ,  “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತ,‌ ಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. ರೂ.250