action against hospitals
ಹಣಕ್ಕಾಗಿ ಸಿಸೇರಿಯನ್ ಮಾಡಿದರೆ ಹುಷಾರ್: ಖಾಸಗಿ ಆಸ್ಪತ್ರೆಗಳಿಗೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು


