Menu

ಕನ್ನಡ ನಟ ದಿಲೀಪ್‌ರಾಜ್‌ ನಿಧನ

ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೂ ಫಲಕಾರಿಯಾಗಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಕ್ರಿಯಾಶೀಲರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿದ್ದರು.