Actor Mohanlal
ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಮಲಯಾಳಂ ಸಿನಿಮಾರಂಗದ ಖ್ಯಾತ ನಟ ಮೋಹನ್‌ಲಾಲ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ 2023ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಮೋಹನ್‌ಲಾಲ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಸೆಪ್ಟೆಂಬರ್ 23ರಂದು ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮೋಹನ್‌ಲಾಲ್ ಮಲಯಾಳಂ ಸಿನಿಮಾದಲ್ಲಿ ಮಾತ್ರವಲ್ಲದೆ ಭಾರತೀಯ ಚಿತ್ರರಂಗದಲ್ಲಿ ಖ್ಯಾತರಾದವರು. 1978ರಲ್ಲಿ


